Sunday, August 23, 2026

BDA Apartments

Home Crime ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಚಿವರೊಬ್ಬರ ವಿರುದ್ಧ ಆರೋಪ ಮಾಡಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ.

ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಚಿವರೊಬ್ಬರ ವಿರುದ್ಧ ಆರೋಪ ಮಾಡಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ.

ಕಲಬುರಗಿ,ಅಕ್ಟೋಬರ್ ,19,2023(www.justkannada.in): ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಚಿವರೊಬ್ಬರ ವಿರುದ್ಧ ಕಿರುಕುಳ ಆರೋಪ ಮಾಡಿ ಬಿಜೆಪಿ ಕಾರ್ಯಕರ್ತನೋರ್ವ  ಆತ್ಮಹತ್ಯೆಗೆ ಶರಣಾಗಿರುವ ಘಟನೆ  ಕಲ್ಬುರ್ಗಿಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದಲ್ಲಿಈ ಘಟನೆ ನಡೆದಿದೆ  ನಡೆದಿದೆ. ಶಿವಕುಮಾರ್​(35) ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ. ಕಾಂಗ್ರೆಸ್ ಕಾರ್ಯಕರ್ತರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.

ನನ್ನ ಸಾವಿಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಚಿವ ಶರಣಪ್ರಕಾಶ್ ಪಾಟೀಲ್ ಕಾರಣ ಎಂದು ಮೂರು ಆಡಿಯೋ ರೆಕಾರ್ಡ್ ಮಾಡಿಟ್ಟು ಶಿವಕುಮಾರ್  ನಿನ್ನೆ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಆತ್ಮಹತ್ಯೆಗೂ ಮುನ್ನ 3 ಆಡಿಯೋ ರೆಕಾರ್ಡ್ ಮಾಡಿದ್ದು, ನನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ಕಾರಣವೆಂದು ಆರೋಪಿಸಿದ್ದು,  ನಾನು ಹಿಂದೂ ಹುಲಿಯಾಗಿದ್ದೇನೆ, ಹಿಂದೂ ಹುಲಿಯಾಗಿ ಸಾಯುತ್ತೇನೆ. ಡಾ.ಶರಣಪ್ರಕಾಶ್ ಪಾಟೀಲ್ ಹಿಂದೂ ಧರ್ಮದ ಬಗ್ಗೆ ಮಾತಾಡಬಾರದು. ಮಾತನಾಡಿದರೆ ಇವರಿಗೆ ಬೆಂಕಿ ಬೀಳುತ್ತೆ ಎಂದು ಆಡಿಯೋ ರೆಕಾರ್ಡ್ ಮಾಡಿದ್ದಾರೆ ಎನ್ನಲಾಗಿದೆ.

Key words: BJP worker- committed -suicide – alleging- harassment -against -Congress workers