ಉಡುಪಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆಗೆ ಯತ್ನ.

ಉಡುಪಿ,ಆಗಸ್ಟ್,17,2022(www.justkannada.in): ಉಡುಪಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮುತ್ತಿಗೆಗೆ ಯತ್ನಿಸುರುವ ಘಟನೆ ನಡೆದಿದೆ.

ಬ್ರಹ್ಮಗಿರಿ ಸರ್ಕಲ್ ನಲ್ಲಿ ವಿ.ಡಿ ಸಾವರ್ಕರ್ ಕಟೌಟ್ ವಿರೋಧಿಸಿದ್ಧ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಇಂದು ಬ್ರಹ್ಮಗಿರಿ ಸರ್ಕಲ್ ನಿಂದ ಕಾಂಗ್ರೆಸ್ ಕಚೇರಿಯತ್ತ ಧಾವಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಈ ವೇಳೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನ ತಡೆದಿದ್ದು ವಾಪಸ್ ಕಳುಹಿಸಿದ್ದಾರೆ. 15 ದಿನ ಸಾವರ್ಕರ್ ಕಟೌಟ್ ಹಾಕಲು ಬಿಜೆಪಿ ಅನುಮತಿ ಪಡೆದಿತ್ತು. ಇದನ್ನ ಕಾಂಗ್ರೆಸ್ ವಿರೋಧಿಸಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

Key words: BJP- workers- District Congress -office – Udupi.