ಬಿಜೆಪಿಯ ನಡೆ ಪಂಚಾಯಿತಿಗಳ ಕಡೆಗೆ : ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು,ನವೆಂಬರ್,08,2020(www.justkannada.in) : ಬಿಜೆಪಿಯ ನಡೆ ಪಂಚಾಯಿತಿಗಳ ಕಡೆಗೆ ಎಂಬ ಗುರಿಯನ್ನಿಟ್ಟುಕೊಂಡು ಕಾರ್ಯನಿರ್ವಹಣೆ ಮಾಡಲಾಗುತ್ತಿದೆ. ಬೇರು ಮಟ್ಟದಿಂದ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ನಮಗಾಗಿ ದುಡಿದ ಕಾರ್ಯಕರ್ತರ ಚುನಾವಣೆಗೆ ನಾವು ಶ್ರಮ ಹಾಕುತ್ತೇವೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

kannada-journalist-media-fourth-estate-under-loss

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಬೆಟ್ಟದಪುರದಲ್ಲಿ ಬಿಜೆಪಿ ಶಕ್ತಿ ಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಮಾತನಾಡಿ, ಶೀಘ್ರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಘೋಷಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾವು ತ್ವರಿತವಾಗಿ ಸಂಘಟನೆ ಮಾಡಿ ಕಾರ್ಯಕರ್ತರು ಗೆಲ್ಲಬೇಕೆಂಬ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು. ನಿಮ್ಮ ಗೆಲುವಿಗೆ ಪ್ರ‍ಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದರು.

ಕಾರ್ಯಕರ್ತರ ಚುನಾವಣೆಗೂ ನಾವು ಅದೇ ರೀತಿ ದುಡಿಯಬೇಕು

ಹೇಗೆ ನಮ್ಮ ಚುನಾವಣೆಗಳಿಗೆ ನಾವು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೆವೋ ಹಾಗೇ, ನಮಗಾಗಿ ದುಡಿದ ಕಾರ್ಯಕರ್ತರ ಚುನಾವಣೆಗೂ ನಾವು ಅದೇ ರೀತಿ ದುಡಿಯಬೇಕು ಎಂಬ ತೀರ್ಮಾನಕ್ಕೆ ಬಂದಿದ್ದೇನೆ. ಈ ಹಿನ್ನೆಲೆಯಲ್ಲಿ ನಾನು ಜಿಲ್ಲಾ ಪ್ರವಾಸ ಕೈಗೊಂಡಿದ್ದೇನೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವನಾಗಿ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಅದಾಲತ್ ಮಾಡುತ್ತೇನೆ. ಆ ಸಂದರ್ಭದಲ್ಲಿ ನಾನು ಈ ಮೊದಲೇ ಕೊಟ್ಟ ಪತ್ರಗಳ ಬಗ್ಗೆಯೂ ಚರ್ಚಿಸಿ, ಕೆಲಸವನ್ನು ಮಾಡಿಕೊಡಲಾಗುವುದು ಎಂದು ಸಚಿವರು ಹೇಳಿದರು.

ಅಧಿಕಾರಾವಧಿ ತಲಾ ಎರಡೂವರೆ ವರ್ಷ, ಮೀಸಲಾತಿ 5 ವರ್ಷಕ್ಕೆ ನಿಗದಿ

ಕಳೆದ ಸರ್ಕಾರದಲ್ಲಿ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ – ಉಪಾಧ್ಯಕ್ಷರ ಅಧಿಕಾರವಧಿ 5 ವರ್ಷಕ್ಕೆ ಹಾಗೂ ಮೀಸಲಾತಿಯನ್ನು 10 ವರ್ಷಕ್ಕೆ ಬದಲಾವಣೆ ಮಾಡುವ ನಿಯಮವನ್ನು ತರಲಾಗಿತ್ತು. ಆದರೆ, ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಅದನ್ನು ಬದಲಾಯಿಸಿ, ಅಧಿಕಾರಾವಧಿಯನ್ನು ತಲಾ ಎರಡೂವರೆ ವರ್ಷ ಹಾಗೂ ಮೀಸಲಾತಿಯನ್ನು 5 ವರ್ಷಕ್ಕೆ ನಿಗದಿಪಡಿಸಿದ್ದಾರೆ ಎಂದು ತಿಳಿಸಿದರು.

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅನುಕೂಲ 

ನಾವು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿದ್ದರಿಂದ ರೈತರಿಗೆ ಈಗ ತಮ್ಮ ಬೆಳೆಯನ್ನು ರಾಜ್ಯದ  ಎಲ್ಲಿಬೇಕಾದರೂ ಮಾರಾಟ ಮಾಡುವ ಅಧಿಕಾರವನ್ನು ನೀಡಿದಂತಾಗಿದೆ. ಜೊತೆಗೆ ಎಪಿಎಂಸಿ ಪರವಾನಗಿ ಹೊಂದಿ ಬೇರೆಡೆ ಮಾರಾಟ ಮಾಡಿದರೆ ದಂಡ ವಿಧಿಸುವುದಲ್ಲದೆ, ಪರವಾನಗಿಯನ್ನೇ ರದ್ದುಪಡಿಸಲಾಗುತ್ತಿತ್ತು. ಈಗ ನಮ್ಮ ಸರ್ಕಾರ ಈ ಕಾನೂನು ತೊಡಕನ್ನು ನಿವಾರಿಸಿದೆ ಎಂದರು.

ದಸರಾ ಮುಗಿದ ತಕ್ಷಣ ಲೆಕ್ಕ ಕೊಟ್ಟಿದ್ದೇವೆ

ದಸರಾಕ್ಕೆ ಸಂಬಂಧಿಸಿದಂತೆ ಲೆಕ್ಕ ಕೊಡುವುದಿಲ್ಲ ಎಂಬ ಆರೋಪ ಪ್ರತಿವರ್ಷ ಕೇಳಿಬರುತ್ತಿತ್ತು. ಹಾಗಾಗಿ ದಸರಾ ಮುಗಿದ ತಕ್ಷಣ ಲೆಕ್ಕ ಕೊಟ್ಟಿದ್ದೇವೆ. ಒಂದೂವರೆ ಕೋಟಿಯಲ್ಲಿ 10 ದಿನದ ದಸರಾ ಆಚರಣೆ ಮಾಡಿ ಸರಳವಾಗಿ ಮಾಡಿ ತೋರಿಸಲಾಗಿದೆ. ಒಟ್ಟಾರೆಯಾಗಿ 7.8 ಕೋಟಿ ರೂಪಾಯಿ ಉಳಿತಾಯವಾಗಿದೆ ಎಂದು ಸಚಿವರು ತಿಳಿಸಿದರು.BJP's-move-towards-panchayats-Minister-S.T. Somashekhar

ಬಿಜೆಪಿ ಹಿರಿಯ ಮುಖಂಡರಾದ ಎಚ್.ವಿಜಯಶಂಕರ್ ಮಾತನಾಡಿ, ಪಕ್ಷದ ಸಂಘಟನೆ ಜೊತೆ ಜೊತೆಗೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಗೆಲ್ಲಬೇಕು ಎಂಬ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ ಎಂದರು.

ಅಲ್ಲದೆ, ಇಲ್ಲಿನ ಮೂರು ಶಕ್ತಿ ಕೇಂದ್ರವಾದ ಬೆಟ್ಟದಪುರ, ರಾವಂದೂರು, ಹಲಗನಹಳ್ಳಿಯ 230 ಕ್ಷೇತ್ರಗಳಲ್ಲೂ ಗ್ರಾಮ ಪಂಚಾಯಿತಿ ಅಭ್ಯರ್ಥಿಯನ್ನು ನಿಯೋಜನೆ ಮಾಡುವ ಸಂಕಲ್ಪ ತೊಡಬೇಕು ಎಂದು ತಿಳಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷರಾದ ಡಾ.ಪ್ರಕಾಶ್ ಬಾಬು ಮಾತನಾಡಿ, ಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುತ್ತೇವೆ. ಜಿಲ್ಲಾ ಉಸ್ತುವಾರಿ ಸಚಿವರ ಸಹಕಾರವನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತೇವೆ ಎಂದು ತಿಳಿಸಿದರು.

ಬಿಜೆಪಿ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷರಾದ ಮಂಗಳಾ ಸೋಮಶೇಖರ್ ಮಾತನಾಡಿ, ಮೈಸೂರು ಜಿಲ್ಲೆಯಲ್ಲಿ ಬರುವ 49 ಮಹಾಶಕ್ತಿ ಕೇಂದ್ರಗಳಲ್ಲಿಯೂ ಸಹ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪ್ರವಾಸ ಮಾಡಿ ಬಲ ತುಂಬುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಹಿರಿಯರು ಹಾಗೂ ಯುವಕರ ತಂಡವು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಗೆಲ್ಲಿಸಿಕೊಂಡು ಬರಬೇಕು ಎಂದು ತಿಳಿಸಿದರು.

ಬಿಜೆಪಿ ಸೇರ್ಪಡೆಗೊಂಡ ಯುವ ಸಮೂಹ

ಇದೇ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳನ್ನು ತೊರೆದು ಬಿಜೆಪಿ ಸೇರ್ಪಡೆಗೊಂಡ ಯುವಕರಿಗೆ ಪಕ್ಷದ ಶಾಲು ನೀಡುವ ಮೂಲಕ ಅಧಿಕೃತವಾಗಿ ಬರಮಾಡಿಕೊಳ್ಳಲಾಯಿತು. ಮಾಜಿ ಶಾಸಕರಾದ ಬಸವರಾಜಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹುಣಸವಾಡಿಯಲ್ಲಿ ಶಕ್ತಿ ಕೇಂದ್ರದ ಸಭೆ

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಹುಣಸವಾಡಿಯಲ್ಲಿ ಬಿಜೆಪಿ ಶಕ್ತಿ ಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಸಚಿವರಾದ ಎಸ್‌.ಟಿ.ಸೋಮಶೇಖರ್ ಮಾತನಾಡಿ, ಕಾರ್ಯಕರ್ತರ ಬೆನ್ನಿಗೆ ಪಕ್ಷ ಹಾಗೂ ಉಸ್ತುವಾರಿ ಸಚಿವರಾಗಿ ತಾವು ಬೆಂಬಲವಾಗಿ ನಿಲ್ಲುವುದಲ್ಲದೆ, ಕಾನೂನುಬದ್ಧವಾದ ಎಲ್ಲ ರೀತಿಯ ಕೆಲಸಗಳನ್ನು ಮಾಡಿಕೊಡುತ್ತೇನೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸುವ ಮೂಲಕ ಮುಂದಿನ ತಾಲೂಕು, ಜಿಲ್ಲಾ ಮಟ್ಟದ ಚುನಾವಣೆಗಳಲ್ಲಿಯೂ ಗೆಲುವಿನ ಚುಕ್ಕಾಣಿಯನ್ನು ಹಿಡಿಯಬೇಕು ಎಂದು ಕರೆ ನೀಡಿದರು.

key words : BJP’s-move-towards-panchayats-Minister-S.T. Somashekhar