ಲಕ್ಷ್ಮಣ್ ಸವದಿಗೆ ಕಾಂಗ್ರೆಸ್ ಸೇರ್ಪಡೆಗೆ ಆಹ್ವಾನ ನೀಡಿದ ಬಿ.ಕೆ ಹರಿಪ್ರಸಾದ್.

ಬೆಂಗಳೂರು,ಏಪ್ರಿಲ್,13,2023(www.justkannada.in): ಅಥಣಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಪಕ್ಷದ ಹೈಕಮಾಂಡ್ ವಿರುದ್ಧ ಸಿಡಿದೆದ್ದಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ನಾಳೆ ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಈ ಬೆನ್ನಲ್ಲೆ ಲಕ್ಷ್ಮಣ್ ಸವದಿಗೆ ಕಾಂಗ್ರೆಸ್ ಸೇರ್ಪಡೆಯಾಗಲು  ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್  ಆಹ್ವಾನ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಬಿ.ಕೆ ಹರಿಪ್ರಸಾದ್, ಲಕ್ಷ್ಮಣ್ ಸವದಿ ಹಿರಿಯ ಮುಖಂಡ.  ಡಿಸಿಎಂ ಹುದ್ದೆ ನಿಭಾಯಿಸಿದವರು. ಕಾಂಗ್ರಸ್  ಸಿದ್ದಾಂತ ಒಪ್ಪಿ ಕಾಂಗ್ರೆಸ್ ಬರುವುದಾದರೇ ಬರಬಹುದು.  ಕಾಂಗ್ರೆಸ್ ಗೆ ಸೇರ್ಪಡೆಯಾಗಬಹುದು ಎಂದು ಹೇಳಿದ್ದಾರೆ.

Key words: BK Hariprasad –invited- Laxman Savadi – join – Congress.