ಇಂದಿನಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಆರಂಭ.

ಬೆಂಗಳೂರು,ಮಾರ್ಚ್,27,2023(www.justkannada.in):  ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡುವೆಯೂ  ಇಂದಿನಿಂದ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆಗಳು ಆರಂಭವಾಗಿವೆ.

ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳ 5 ಮತ್ತು 8ನೇ ತರಗತಿ ಮಕ್ಕಳಿಗೆ ಪರೀಕ್ಷೆ ನಡೆಯುತ್ತಿದೆ. 5ನೇ ತರಗತಿ  ವಿದ್ಯಾರ್ಥಿಗಳಿಗೆ ಇಂದಿನಿಂದ ಮಾ.30ರವರೆಗೆ ಹಾಗೂ 8ನೇ ತರಗತಿ  ವಿದ್ಯಾರ್ಥಿಗಳಿಗೆ ಏಪ್ರಿಲ್ 1ರವರೆಗೆ ಪರೀಕ್ಷೆ ನಡೆಯಲಿದೆ.

ಈ ನಡುವೆ 5 ಮತ್ತು 8ನೇ ತರಗತಿಗೆ ಬೋರ್ಡ್ ಪರೀಕ್ಷೆ ಸಂಬಂಧ ಇಂದು ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಗೊಂದಲದ ನಡುವೆ ಪರೀಕ್ಷೆ ನಡೆಸಲು ಇಲಾಖೆ ಮುಂದಾಗಿದೆ. ಆಯಾ ಶಾಲೆಗಳೇ ಪರೀಕ್ಷಾ ಕೇಂದ್ರಗಳಾಗಿದ್ದು, ಸುಮಾರು 20 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಬಹುತೇಕ ಎಲ್ಲ ಪರೀಕ್ಷೆಗಳು ಮಧ್ಯಾಹ್ನದ ಅವಧಿಯಲ್ಲಿ ನಡೆಯಲಿವೆ.

Key words: Board-examination – 5th and 8th –class-students- start- today.