ಬಾಯ್ಲರ್ ಸ್ಪೋಟ ಪ್ರಕರಣ: ಮೃತರ ಸಂಖ್ಯೆ 7ಕ್ಕೆ ಏರಿಕೆ

ಬೆಳಗಾವಿ,ಜನವರಿ,8,2026 (www.justkannada.in):  ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕಿನ ಮರಕುಂಬಿಯಲ್ಲಿ ಸಕ್ಕರೆ ಕಾರ್ಖಾನೆಯಲ್ಲಿ ನಿನ್ನೆ ಸಂಭವಿಸಿದ್ದ ಬಾಯ್ಲರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನಿನ್ನೆ ಮರಕುಂಬಿಯಲ್ಲಿ ವಿಕ್ರಂ ಇನಾಮದಾರ್ ಪ್ರಭಾಕರ್ ಕೋರೆ ಸಹಭಾಗಿತ್ವದ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡು ಮೂವರು ಸಾವನ್ನಪ್ಪಿದ್ದರು. ಹಲವು ಮಂದಿಗೆ ಗಾಯಗಳಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದೀಗ ಇಂದು ನಾಲ್ವರು ಕಾರ್ಮಿಕರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಕ್ಷಯ್,  ಭರತೇಶ್, ಸುದರ್ಶನ್, ಮಂಜುನಾಥ್, ಗುರು, ದೀಪಕ್, ಮಂಜು ಮೃತಪಟ್ಟಿರುವ 7 ಮಂದಿ ಕಾರ್ಮಿಕರು. ಇನ್ನು ಓರ್ವ ಗಾಯಾಳುವಿಗೆ ಬೆಳಗಾವಿಯ ಕೆಎಲ್ ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಿನ್ನೆ ದುರಂತ ನಡೆದರೂ ಇದುವರೆವಿಗೂ ಸಹ ಕಾರ್ಖಾನೆಯಿಂದ ಯಾವುದೇ ಸ್ಪಂದನೆ ದೊರೆತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

Key words: Boiler, explosion case, Death , 7 Workers