Sunday, September 20, 2026

BDA Apartments

ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು BDA JK_Adv BDA Adv
Home Cinema ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮುಂಬೈ, ಜೂನ್ 06, 2021 (www.justkannada.in): ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಅನಾರೋಗ್ಯಕ್ಕೀಡಾಗಿದ್ದು, ಮುಂಬೈನ ಪಿಡಿ ಹಿಂದುಜಾ ಆಸ್ಪತ್ರೆಯಲ್ಲಿಗೆ ದಾಖಲಿಸಲಾಗಿದೆ.

ತೀವ್ರ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಅಂದಹಾಗೆ 98 ವರ್ಷದ ದಿಲೀಪ್ ಕುಮಾರ್ ಕೆಲವು ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ನಿಯಮಿತ ಆರೋಗ್ಯ ತಪಾಸಣೆ ಬಳಿಕ ಬಿಡುಗಡೆಯಾಗಿದ್ದರು.

ಇದೀಗ ಮತ್ತೆ ಆರೋಗ್ಯ ಸಮಸ್ಯೆ ಎದುರಾಗಿದ್ದು, ಅವರ ಅಭಿಮಾನಿಗಳು, ಚಿತ್ರರಂಗ ಆತಂಕಕ್ಕೀಡಾಗಿದೆ.