ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ: ಬಾಂಬ್ ನಿಷ್ಕ್ರಿಯಗೊಳಿಸಲು ಯತ್ನ…

ಮಂಗಳೂರು,ಜ,20,2020(www.justkannada.in):  ಮಂಗಳೂರು ಏರ್ ಪೋರ್ಟ್ ನಲ್ಲಿ  ಪತ್ತೆಯಾಗಿದ್ದ ಅನುಮಾನಸ್ಪದ ಬ್ಯಾಗ್  ನಲ್ಲಿ ಸಜೀವ ಬಾಂಬ್ ಇರುವುದು ಕಂಡು ಬಂದಿದೆ.

ಮಂಗಳೂರು ವಿಮಾನ ನಿಲ್ದಾಣದ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆಯಾಗಿತ್ತು. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯಾ ದಳ ಶ್ವಾನದಳ,ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದು ಈ ವೇಳೆ ಬ್ಯಾಗ್ ನಲ್ಲಿ ಸಜೀವ ಬಾಂಬ್ ಇರುವುದು ಪತ್ತೆಯಾಗಿದೆ.

ಸಜೀವ ಬಾಂಬ್ ಅನ್ನ ನಿಷ್ಕ್ರಿಯಗೊಳಿಸಲು ಯತ್ನಿಸಲಾಗುತ್ತಿದೆ. ಸ್ಥಳಕ್ಕೆ ಡಿಸಿಪಿ ಅರುಣಾಂಶುಗಿರಿ ಭೇಟಿ ನೀಡಿದ್ದಾರೆ. ಸಜೀವ ಬಾಂಬ್ ಇರುವ ಬ್ಯಾಗ್ ಅನ್ನ ಸುರಕ್ಷಿತ ಸ್ಥಳಕ್ಕೆ ಇಟ್ಟುದ್ದು  ವಿಮಾನ ನಿಲ್ದಾಣದಲ್ಲಿ ಆತಂಕ ಮನೆ ಮಾಡಿದೆ. ಮಂಗಳೂರು ವಿಮಾನ ನಿಲ್ದಾಣ ಸಂಪರ್ಕಿಸುವ ರಸ್ತೆ ಮಾರ್ಗಗಳು ಬದಲಾವಣೆ ಮಾಡಲಾಗಿದೆ. ಏರ್ ಪೋರ್ಟ್ ಆವರಣದಲ್ಲಿ ಪೊಲೀಸರ ಸರ್ಪಗಾವಲು ಹಾಕಲಾಗಿದ್ದು , ಸಾರ್ವಜನಿಕರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

Key words: bomb  -bag- found – Mangalore airport- Inspection – police.