ಬಾಂಬ್ ಬ್ಲಾಸ್ಟ್ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ.

ಬೆಂಗಳೂರು,ಮಾರ್ಚ್,2,2024(www.justkannada.in): ಬೆಂಗಳೂರನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ  ಬಾಂಬ್ ಬ್ಲಾಸ್ಟ್ ನಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯವನ್ನ ಸಿಎಂ ಸಿದ್ದರಾಮಯ್ಯ ವಿಚಾರಿಸಿದರು.

ಬ್ರೂಕ್ ಫಿಲ್ಡ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ  ಗಾಯಾಳುಗಳ ಆರೋಗ್ಯ ವಿಚಾರಿಸಿದರು. , ಐಸಿಯು ನಲ್ಲಿದ್ದ ಸ್ವರ್ಣಾಂಬ ಎಂಬುವವರ ಆರೋಗ್ಯ ವಿಚಾರಣೆ ಮಾಡಿ  ವೈದ್ಯರಿಂದ ಮಾಹಿತಿ ಕಲೆ ಹಾಕಿದರು. ಅಲ್ಲದೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡವಂತೆ ಸೂಚನೆ ನೀಡಿದರು.

ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಐಸಿಯುನಲ್ಲಿ ಸ್ವರ್ಣಾಂಬ ಚಿಕಿತ್ಸೆ ಪಡೆಯುತ್ತಿದ್ದಾರೆ.  ಗಾಯಾಳುಗಳ ವೆಚ್ಚವನ್ನ ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದರು.

Key words: Bomb blast –case-CM Siddaramaiah -visit – hospital – injured- health