ಏರ್ ಪೋರ್ಟ್ ನಲ್ಲಿ ಬಾಂಬ್ ಪತ್ತೆ ಪ್ರಕರಣ: ಮಂಗಳೂರು ಪೊಲೀಸರಿಗೆ ಆರೋಪಿ ಆದಿತ್ಯರಾವ್ ಹಸ್ತಾಂತರ…

ಬೆಂಗಳೂರು,ಜ,22,2020(www.justkannada.in):  ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ರಾವ್ ನನ್ನ ಮಂಗಳೂರು ಪೊಲೀಸರಿಗೆ ಬೆಂಗಳೂರು ಪೊಲೀಸರು ಹಸ್ತಾಂತರಿಸಿದ್ದಾರೆ.

ನಗರದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಆರೋಪಿ ಆದಿತ್ಯರಾವ್ ನನ್ನ ಎಸಿಪಿ ಬೆಳ್ಯಪ್ಪ ನೇತೃತ್ವದ ತಂಡ ವಶಕ್ಕೆ ಪಡೆದಿದೆ. ಇದಕ್ಕೂ ಮುನ್ನ ಆರೋಪಿ ಆದಿತ್ಯರಾವ್ ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು. ನಂತರ ಹಲಸೂರು ಗೇಟ್ ಪೊಲೀಸ್ ಠಾಣೆಗೆ ಕರೆತರಲಾಗಿತ್ತು.

ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯ ರಾವ್ ಇಂದು ಬೆಳಿಗ್ಗೆ ಬೆಂಗಳೂರು ಪೊಲೀಸರ ಎದುರು ಶರಣಾಗಿ ತಪ್ಪೊಪ್ಪಿಕೊಂಡಿದ್ದನು.

Key words: Bomb detection -case –airport-Adithyarao -handed over – Mangalore police