ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಪತ್ತೆ ಪ್ರಕರಣ. ಆರೋಪಿ ಆದಿತ್ಯರಾವ್ ಪೊಲೀಸರ ವಶಕ್ಕೆ ನೀಡಿದ 1ನೇ ಎಸಿಎಂಎಂ ಕೋರ್ಟ್…

ಬೆಂಗಳೂರು,ಜ,22,2020(www.justkannada.in): ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯರಾವ್ ನನ್ನ ಮಂಗಳೂರು ಪೊಲೀಸರ ವಶಕ್ಕೆ ನೀಡಿ 1ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

ಆರೋಪಿ ಆದಿತ್ಯರಾವ್ ನನ್ನ ಮಂಗಳೂರಿಗೆ ಕರೆದೊಯ್ಯಲು 1ನೇ ಎಸಿಎಂಎಂ ಕೋರ್ಟ್ ಪೊಲೀಸರಿಗೆ ಅನುಮತಿ ನೀಡಿದೆ.  ಅಲ್ಲದೆ ನಾಳೆ 5 ಗಂಟೆಯೊಳಗೆ ಮಂಗಳೂರಿನ 6ನೇ ಜೆಎಂಎಫ್ ಸಿ ಕೋರ್ಟ್ ಗೆ ಆರೋಪಿಯನ್ನ ಹಾಜರುಪಡಿಸಬೇಕು ಎಂದು ಮಂಗಳೂರು ಪೊಲೀಸರಿಗೆ ಸೂಚನೆ ನೀಡಿದೆ.

ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರ ಎದುರು ಶರಣಾಗಿದ್ದ  ಆರೋಪಿ ಆದಿತ್ಯರಾವ್ ನನ್ನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಮಂಗಳೂರು ಪೊಲೀಸರ ವಶಕ್ಕೆ ನೀಡಲಾಗಿತ್ತು. ನಂತರ ಪೊಲೀಸರು ಆರೋಪಿ ಆದಿತ್ಯನನ್ನ 1ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು.

Key words: Bomb detection -case -Mangalore airport- 1st ACMM court -hand over -custody – accused