ತಮಿಳುನಾಡು ಸಿಎಂ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ

ಚೆನ್ನೈ,ಅಕ್ಟೋಬರ್,3,2025 (www.justkannada.in): ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ  ಸರ್ಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ತಮಿಳುನಾಡು ಸಿಎಂ ಸ್ಟಾಲಿನ್ ನ ಚೆನ್ನೈನ ಸರ್ಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಪೊಲೀಸರು, ಬಾಂಬ್ ಸ್ಕ್ವಾಡ್ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ತಮಿಳುನಾಡು ರಾಜ್ಯಪಾಲರ ನಿವಾಸಕ್ಕೂ ಇದೇ ರೀತಿಯ ಬೆದರಿಕೆ ಕರೆಗಳು ಬಂದಿವೆ ಎಂದು ವರದಿಗಳು ತಿಳಿಸಿವೆ.

ಜುಲೈನಲ್ಲಿ, ಸ್ಟಾಲಿನ್ ಅವರ ಚೆನ್ನೈ ನಿವಾಸಕ್ಕೂ ಇದೇ ರೀತಿಯ ಬಾಂಬ್ ಬೆದರಿಕೆ ಬಂದಿತ್ತು. ಹಳೆಯ ಆಯುಕ್ತರ ಕಚೇರಿಯ ನಿಯಂತ್ರಣ ಕೊಠಡಿಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು.

Key words: Bomb threat, Tamilnadu, CM, residence