Wednesday, October 7, 2026

BDA Apartments

immense respect BDA JK_Adv BDA Adv
Home Crime ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ

ತಿರುವನಂತಪುರಂ,ಆಗಸ್ಟ್,22,2024 (www.justkannada.in): ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು ಈ ಹಿನ್ನೆಲೆಯಲ್ಲಿ ತಿರುವನಂತಪುರಂ ಏರ್ ಪೋರ್ಟ್ ನಲ್ಲಿ ಸಂಪೂರ್ಣ ಬಂದ್ ಮಾಡಲಾಗಿದೆ.

ಮುಂಬೈನಿಂದ ತಿರುವನಂತಪುರಕ್ಕೆ ತೆರಳುತ್ತಿದ್ದ ಏರ್ ಇಂಡಿಯಾದ ಎಐ 657 (ಬಿಒಎಂ-ಟಿಆರ್ವಿ)  ವಿಮಾನಕ್ಕೆ  ಇಂದು 07 ಬಾಂಬ್ ಬೆದರಿಕೆ ಕರೆ ಬಂದಿದ್ದು ವಿಮಾನದಲ್ಲಿದ್ದ ಎಲ್ಲಾ 135 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ  ಎಂಬ ಮಾಹಿತಿ ಲಭ್ಯವಾಗಿದೆ. ತಿರುವನಂತಪುರಂನ ವಿಮಾನ ನಿಲ್ದಾಣವನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ಟಿಆರ್ ವಿ ವಿಮಾನ ನಿಲ್ದಾಣದಲ್ಲಿ 07.36 ಗಂಟೆಗೆ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.  ಸ್ಥಳಕ್ಕೆ ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಆಗಮಿಸಿದ್ದು ವಿಮಾನದಿಂದ ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Bomb threat, call, Air India, flight