ಮೈಸೂರಿನ ವಾಣಿಜ್ಯ ತೆರಿಗೆ ಕಚೇರಿಗೆ ಬಾಂಬ್ ಬೆದರಿಕೆ ಕರೆ: ಬಾಂಬ್ ಸ್ಕ್ವಾಡ್ ಮತ್ತು ಪೊಲೀಸರಿಂದ ಪರಿಶೀಲನೆ.

ಮೈಸೂರು,ಸೆಪ್ಟಂಬರ್,22,2021(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನ ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇದೆ ಎಂದು ಪತ್ರ ಬಂದ ಹಿನ್ನೆಲೆಯಲ್ಲಿ ಕಚೇರಿಯಲ್ಲಿದ್ದ ಸಿಬ್ಬಂದಿ ಹೊರಗೆ ಓಡಿ ಬಂದಿರುವ ಘಟನೆ ಇಂದು ನಡೆದಿದೆ.

ಮೈಸೂರಿನ ದೇವರಾಜ ಮೊಹಲ್ಲಾದಲ್ಲಿರುವ ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇದೆ ಎಂದು ಬೆದರಿಕೆ ಕರೆ ಬಂದಿದೆ ಎನ್ನಲಾಗಿದ್ದು, ಈ ಬಾಂಬ್ ವಿಷಯ ತಿಳಿಯುತ್ತಿದ್ದಂತೆ ಸಿಬ್ಬಂದಿ ಹೊರಗೆ ಓಡಿ ಬಂದಿದ್ದಾರೆ.

ಈ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಬಾಂಬ್ ಸ್ಕ್ವಾಡ್ ಮತ್ತು ಪೊಲೀಸರು ವಾಣಿಜ್ಯ ತೆರಿಗೆ ಕಚೇರಿಯಲ್ಲಿ ತಪಾಸಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Bomb threat- call – commercial tax- office -Mysore