ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್.

ಬೆಂಗಳೂರು,ಡಿಸೆಂಬರ್,1,2023(www.justkannada.in): ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ವಿಚಾರ ಸಂಬಂಧ,  ಯಾರೂ ಕೂಡ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು  ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಇಮೇಲ್ ಮೂಲಕ 15ಕ್ಕೆ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಹಿನ್ನೆಲೆ ಸದಾಶಿವನಗರದಲ್ಲಿರುವ ನೀವ್ ಅಕಾಡಮಿ ಶಾಲೆಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಆಡಳಿತ ಮಂಡಳಿಯಿಂದ ಮಾಹಿತಿ ಪಡೆದರು.

ಬಳಿಕ ಮಾತನಾಡಿದ ಅವರು, ವಿಚಾರ ತಿಳದ ನಾನೇ ಗಾಬರಿಗೊಂಡು  ಶಾಲೆಗೆ ಭೇಟಿ ನೀಡಿದ್ದೇನೆ. ಮಾಧ್ಯಮಗಳಲ್ಲಿ ಸುದ್ದಿ ನೋಡಿ ಶಾಲೆಗಳಿಗೆ ಭೇಟಿ ನೀಡಿರುವೆ. ನನ್ನ ಮನೆ ಬಳಿಯೇ ಇರುವ ಶಾಲೆಯಲ್ಲಿ ಪೊಲೀಸರು ಪರಿಶೋಧಿಸುತ್ತಿದ್ದಾರೆ. ಯಾರೂ ಕೂಡ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: Bomb threat -calls – Bangalore schools- No need – worry – DCM-DK Shivakumar.