ಗದಗ, ಡಿಸೆಂಬರ್,15,2025 (www.justkannada.in): ಗದಗ ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು ಗದಗ ಜಿಲ್ಲಾಡಳಿತ ಭವನದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಅರ್ನಾ ಅಶ್ವಿನ್ ಶೇಖರ್ ಎಂಬ ಇ-ಮೇಲ್ ಐಡಿಯಿಂದ ಬಾಂಬ್ ಬೆದರಿಕೆ ಹಾಕಲಾಗಿದೆ. ನಿಮ್ಮ ಜಿಲ್ಲಾಧಿಕಾರಿ ಕಚೇರಿಯಲ್ಲಿ ಐದು ಬಾಂಬ್ಗಳನ್ನು ಶೀಘ್ರದಲ್ಲೇ ಸ್ಫೋಟಿಸಲಾಗುವುದು. ಪಾಕಿಸ್ತಾನ-ತಮಿಳುನಾಡು ಡಿಎಂಕೆ 2026ರ ಚುನಾವಣೆಗೆ ಗಮನವನ್ನು ಬೇರೆಡೆ ಸೆಳೆಯಲು ಬಯಸುತ್ತಿದೆ ಎಂದು ಉಲ್ಲೇಖಿಸಲಾಗಿದೆ.
ಸದ್ಯ ಗದಗ ಜಿಲ್ಲಾಡಳಿತ ಭವನದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಶ್ವಾನದಳ, ಬಾಂಬ್ ಪತ್ತೆದಳ ಸಿಬ್ಬಂದಿ ಇಂಚಿಂಚು ತಪಾಸಣೆ ಮಾಡಿದ್ದಾರೆ. ಡಿವೈಎಸ್ಪಿ ಮುರ್ತುಜಾ ಖಾಜಿ, ಸಿಪಿಐ ಲಾಲಸಾಬ್ ಜೂಲಕಟ್ಟಿ, ಸಿದ್ದರಾಮೇಶ್, ಪಿಎಸ್ಐ ವ್ಹಿಜಿ ಪವಾರ ಸೇರಿದಂತೆ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗಿದೆ.
ಹಾಗೆಯೇ ಮಂಗಳೂರಿನ ಆರ್‌ಟಿಒ ಕಚೇರಿಗೂ ಇ-ಮೇಲ್‌ಗೆ ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದಾರೆ. ಮಂಗಳೂರಿನ ನೆಹರು ಮೈದಾನದ ಬಳಿಯ ಆರ್‌ಟಿಒ ಕಚೇರಿಗೆ 5 ಕಡೆ ಬಾಂಬ್ ಸ್ಫೋಟಿಸುವುದಾಗಿ ಕಿಡಿಗೇಡಿಗಳಿಂದ ಮೇಲ್ ರವಾನಿಸಲಾಗಿದೆ. ಸದ್ಯ ಆರ್‌ಟಿಒ ಕಚೇರಿಗೆ ಮಂಗಳೂರು ಪೊಲೀಸರು, ಬಾಂಬ್ ನಿಷ್ಕ್ರಿಯ ದಳದಿಂದ ಇಡೀ ಕಟ್ಟಡವನ್ನು ತಪಾಸಣೆ ನಡೆಸಲಾಗುತ್ತಿದೆ.
Key words: Bomb threat, DC Office, building, government office







