ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ: ಮಕ್ಕಳು ಸುರಕ್ಷಿತ ಸ್ಥಳಕ್ಕೆ ರವಾನೆ.

ಬೆಂಗಳೂರು,ಜನವರಿ,6,2023(www.justkannada.in):  ಬೆಂಗಳೂರಿನಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್​ ಬಂದಿದ್ದು ಶಾಲೆಯ ಮಕ್ಕಳನ್ನ ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ.

ರಾಜಾಜಿನಗರದ ಎನ್​ಪಿಎಸ್  ಶಾಲೆಗೆ ಬಾಂಬ್ ಬೆದರಿಕೆ ಬಂದಿದ್ದು, ಕೂಡಲೇ ಎಚ್ಚೆತ್ತ ಶಾಲಾ ಆಡಳಿತ ಮಂಡಳಿ  ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಸವೇಶ್ವರನಗರ, ರಾಜಾಜಿನಗರ ಠಾಣೆ ಪೊಲೀಸರ ಭೇಟಿ ನೀಡಿದ್ದು,  ಬಾಂಬ್ ಪತ್ತೆ ದಳ, ಶ್ವಾನ ದಳದಿಂದ ಶಾಲೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ತಪಾಸಣೆ ನಂತರ ಹುಸಿ ಬೆದರಿಕೆ ಇ-ಮೇಲ್​ ಎಂಬುದು ದೃಢಪಟ್ಟಿದ್ದು, ಪ್ರಕರಣ ಸಂಬಂಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Key words: Bomb -threat – private school- Bangalore