Sunday, September 20, 2026

BDA Apartments

ಡಿ.ಕೆ ಶಿವಕುಮಾರ್ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ ಕರೆ BDA JK_Adv BDA Adv
Home Crime ಡಿ.ಕೆ ಶಿವಕುಮಾರ್ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ ಕರೆ.

ಡಿ.ಕೆ ಶಿವಕುಮಾರ್ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ ಕರೆ.

ಬೆಂಗಳೂರು,ಜುಲೈ,18,2022(www.justkannada.in): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಡೆತನದ ಶಾಲೆಗೆ  ಇ-ಮೇಲ್  ಮೂಲಕ ಕಿಡಿಗೇಡಿಗಳು ಬಾಂಬ್  ಬೆದರಿಕೆ ಸಂದೇಶ ಕಳುಹಿಸಿದ್ದಾರೆ.

ಆರ್ ಆರ್ ನಗರದಲ್ಲಿರುವ ಡಿ.ಕೆ ಶಿವಕುಮಾರ್  ಒಡೆತನದ ನ್ಯಾಷನಲ್ ಹಿಲ್ ವ್ಯೂವ್ ಪಬ್ಲಿಕ್ ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ನಿನ್ನೆ ಸಂಜೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಿದ್ದಾರೆ.ಡಿ.ಕೆ ಶಿವಕುಮಾರ್ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ ಕರೆ bomb threat

ಇಂದು ಬೆಳಿಗ್ಗೆ ಶಾಲೆಗೆ ಬಂದು ಪರಿಶೀಲಿಸುವ ವೇಳೆ ಬೆದರಿಕೆ ಸಂದೇಶ ಪತ್ತೆಯಾಗಿದೆ. ಶಾಲಗೆ ಆರ್ ಆರ್ ನಗರ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಶಾಲೆಯಿಂದ ಮಕ್ಕಳನ್ನ ಶಿಫ್ಟ್ ಮಾಡಿ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದೆ.

Key words: bomb threat – school-owned -DK Shivakumar.