ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬಾಕ್ಸ್ ಸ್ಪೋಟ ಪ್ರಕರಣ: ರಾಜ್ಯಾದ್ಯಂತ ಕಟ್ಟೆಚ್ಚರ: ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಬಿಗಿ ಭದ್ರತೆ….

ಬೆಂಗಳೂರು,ಅ,21,2019(www.justkannada.in): ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಅನುಮಾನಸ್ಪದ ಬಾಕ್ಸ್ ಸ್ಪೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬೆಂಗಳೂರು ಸೇರಿ ರಾಜ್ಯಾದ್ಯಂತ  ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾದ ಅನುಮಾನಸ್ಪದ  ಪಾರ್ಸಲ್ ಬಾಕ್ಸ್ ಒಪನ್ ಮಾಡಿದಾಗ ಸ್ಪೋಟಗೊಂಡಿದ್ದು ಈ  ವೇಳೆ ಹುಸೇನ್ ಸಾಬ್ ಎಂಬುವವರು ಗಾಯಗೊಂಡಿದ್ದರು. ಘಟನೆ ನಡೆದ ಬೆನ್ನಲ್ಲೆ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಇನ್ನು ರೈಲ್ವೆ ನಿಲ್ದಾಣದ ಬಳಿ 100 ಮಂದಿ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ರೈಲ್ವೆ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಎಲ್ಲಾ ಪ್ರಯಾಣಿಕರನ್ನ ಪೊಲೀಸರು  ತಪಾಸಣೆ ಮಾಡಲಾಗುತ್ತಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.

ಈ ವೇಳೆ ಪಾರ್ಸಲ್ ಬಾಕ್ಸ್ ಮೇಲೆ ಬಾಕ್ಸ್ ಶಾಸಕ ಪ್ರಕಾಶ್ ಅಬೀತ್ಕರ್ ಹೆಸರಿದೆ ಎಂದು ತಿಳಿದು ಬಂದಿದೆ. ಈ ನಡುವೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸ್ಪೋಟಕ 8 ವಸ್ತುಗಳು ಪತ್ತೆಯಾಗಿದೆ ಎನ್ನಲಾಗಿದ್ದು, ಸದ್ಯ ಪೊಲೀಸರು ಅವುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು ಪರಿಶೀಲನೆ ನಡೆಸಲಾಗಿದೆ.

Key words: Box-explosion- case – Hubli-Tight security –Bangalore- railway station.