Sunday, August 16, 2026

BDA Apartments

Home Crime ತಮಿಳುನಾಡಿನಲ್ಲಿ ಜಲ್ಲಿಕಟ್ಟು ವೀಕ್ಷಿಸಲು ಬಂದಿದ್ದ ಬಾಲಕ ಗೂಳಿ ದಾಳಿಗೆ ಬಲಿ

ತಮಿಳುನಾಡಿನಲ್ಲಿ ಜಲ್ಲಿಕಟ್ಟು ವೀಕ್ಷಿಸಲು ಬಂದಿದ್ದ ಬಾಲಕ ಗೂಳಿ ದಾಳಿಗೆ ಬಲಿ

ಬೆಂಗಳೂರು, ಜನವರಿ 22, 2022 (www.justkannada.in): ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದ ಗೂಳಿ ಪಳಗಿಸುವ ಕ್ರೀಡೆ ಜಲ್ಲಿಕಟ್ಟು ವೀಕ್ಷಿಸಲು ಬಂದಿದ್ದ 14 ವರ್ಷದ ಬಾಲಕ ಗೂಳಿಯೊಂದರ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದಾನೆ.

ಮೃತ ಬಾಲಕನನ್ನು ಗೋಕುಲ್ (14) ಎಂದು ಗುರುತಿಸಾಗಿದ್ದು, ಈತ ತಡಂಗಂ ಗ್ರಾಮದಲ್ಲಿ ನಡೆದ ಜಲ್ಲಿಕಟ್ಟು ವೀಕ್ಷಿಸಲು ತನ್ನ ಸಂಬಂಧಿಕರೊಂದಿಗೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಬಾಲಕನ ಹೊಟ್ಟೆಗೆ ಕೊಂಬಿನಿಂದ ತಿವಿದು ತೀವ್ರವಾಗಿ ಗಾಯಗೊಂಡಿದ್ದ ಬಾಲಕನನ್ನು ಕೂಡಲೇ ಅ ಧರ್ಮಪುರಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಘಟನೆ ಸಂಬಂಧ ಧರ್ಮಪುರಿ ಪೊಲೀಸರು ತನಿಖೆ ಆರಂಭಿಸಿದ್ದು, ಗೋಕುಲ್ ಹೇಗೆ ಗಾಯಗೊಂಡಿದ್ದಾರೆ ಎಂಬುದನ್ನು ಪತ್ತೆ ಹಚ್ಚಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಎನ್ನಲಾಗುತ್ತಿದೆ.