Saturday, August 8, 2026

BDA Apartments

Home Crime ವಿದ್ಯುತ್ ತಂತಿ ತುಳಿದು ಬಾಲಕ ಸಾವು

ವಿದ್ಯುತ್ ತಂತಿ ತುಳಿದು ಬಾಲಕ ಸಾವು

ಚಿಕ್ಕಬಳ್ಳಾಪುರ, ಆಗಸ್ಟ್, 23, 2020(www.justkannada.in) : ಸ್ನೇಹಿತರೊಂದಿಗೆ ಗಣಪತಿ ಹಬ್ಬ ಸಂಭ್ರಮದಲ್ಲಿದ್ದ ಬಾಲಕ ತುಂಡಾಗಿದ್ದ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಬಸಾಪುರ ಗ್ರಾಮದಲ್ಲಿ‌ ನಡೆದಿದೆ. boy death-electric-wire-parents-pain

ಗ್ರಾಮದ ಉಮಾಶಂಕರ್‌ ಅವರ ಮಗ ಮಹೇಶ್ (12) ಮೃತ ಬಾಲಕ ಎಂದು ತಿಳಿದು ಬಂದಿದೆ. ನೆನ್ನೆ ರಾತ್ರಿ ಮಂಟಪಕ್ಕೆ ವಿದ್ಯುತ್ ಅಲಂಕಾರ ಮಾಡಲು ಹೋಗಿ ತುಂಡಾಗಿ ಬಿದ್ದ ವಿದ್ಯುತ್ ತಂತಿಯನ್ನು ಬಾಲಕ ತುಳಿದಿದ್ದಾನೆ.jk-logo-justkannada-logo

ಗಣೇಶ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡುತ್ತಿದ್ದ ಗ್ರಾಮದಲ್ಲಿ ಈಗ ನೀರವ ಮೌನ ಆವರಿಸಿದೆ. ಮಗನನ್ನು ಕಳೆದುಕೊಂಡ ಹೆತ್ತವರ ರೋಧನ ಮುಗಿಲು ಮುಟ್ಟಿದೆ. ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ಬಾಲಕನ ಶವವನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

Key words : boy death-electric-wire-parents-pain