Wednesday, September 30, 2026

BDA Apartments

Home Front Page ಬಡವರ ಬಿಪಿಎಲ್ ಕಾರ್ಡ್ ಗಳಿಗೆ ಯಾವುದೇ ತೊಂದರೆ ಇಲ್ಲ- ಡಿಸಿಎಂ ಡಿಕೆ ಶಿವಕುಮಾರ್

ಬಡವರ ಬಿಪಿಎಲ್ ಕಾರ್ಡ್ ಗಳಿಗೆ ಯಾವುದೇ ತೊಂದರೆ ಇಲ್ಲ- ಡಿಸಿಎಂ ಡಿಕೆ ಶಿವಕುಮಾರ್

ಬಡವರ ಬಿಪಿಎಲ್ ಕಾರ್ಡ್ ಗಳಿಗೆ ಯಾವುದೇ ತೊಂದರೆ ಇಲ್ಲ puliyogare,ayyangar WhatsApp 11 16 at 12.03.42 PM

ಬೆಂಗಳೂರು ,ನವೆಂಬರ್,25,2024 (www.justkannada.in): ಬಡವರ ಬಿಪಿಎಲ್ ಕಾರ್ಡ್ ಗಳಿಗೆ ಯಾವುದೇ ತೊಂದರೆ ಇಲ್ಲ. ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆ ನಡೆಯುತ್ತಿದ್ದು, ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಡವರ ಬಿಪಿಎಲ್ ಕಾರ್ಡ್ ಗಳಿಗೆ ಯಾವುದೇ ತೊಂದರೆಯಾಗಲ್ಲ. ಬಡವರಿಗೆ ಯಾರಿಗೂ ತೊಂದರೆ ಆಗಲು ಬಿಡುವುದಿಲ್ಲ. ಎಲ್ಲಾ ಬಡವರಿಗೂ ಕೂಡ ಕಾರ್ಡ್ ಗಳನ್ನು ಕೊಡುತ್ತೇವೆ. ನಾವು ಯಾವುದೇ ಕಾರ್ಡುಗಳನ್ನು ರದ್ದು ಮಾಡಿಲ್ಲ ಎಂದರು.

ತೆರಿಗೆದಾರರ ಮತ್ತು ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ರದ್ದು ವೇಳೆ ಕೆಲ ಅರ್ಹರ ಬಿಪಿಎಲ್ ಕಾರ್ಡ್ ಗಳೂ ರದ್ದಾದ ಹಿನ್ನೆಲೆಯಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆ ಮಾಡಲಾಗುತ್ತಿದ್ದು ಅರ್ಹರಿಗೆ ವಿತರಣೆ ಮಾಡಲಾಗುತ್ತಿದೆ.

Key words: no problem, BPL cards, poor, DCM DK Shivakumar