Friday, August 21, 2026

BDA Apartments

Home Cinema ಬ್ರಾಹ್ಮಣರು-ಬ್ರಾಹ್ಮಣ್ಯದ ಅವಹೇಳನ ಆರೋಪ: ನಟ ಚೇತನ್ ವಿರುದ್ಧ ಎಫ್ ಐಆರ್

ಬ್ರಾಹ್ಮಣರು-ಬ್ರಾಹ್ಮಣ್ಯದ ಅವಹೇಳನ ಆರೋಪ: ನಟ ಚೇತನ್ ವಿರುದ್ಧ ಎಫ್ ಐಆರ್

ಬೆಂಗಳೂರು, ಜೂನ್ 11, 2021 (www.justkannada.in): ಸಾಮಾಜಿಕ ಕಾರ್ಯಕರ್ತ, ನಟ ಚೇತನ್ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ‌.

 ಬ್ರಾಹ್ಮಣರು ಹಾಗೂ ಬ್ರಾಹ್ಮಣ್ಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಚೇತನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಈ ಕುರಿತು ವಿಪ್ರ ಯುವ ವೇದಿಕೆಯ ಪವನ್ ಕುಮಾರ್ ಶರ್ಮಾ ದೂರು ನೀಡಿದ್ದರು. ಧಾರ್ಮಿಕ ಭಾವನೆ ಕೆರಳಿಸುವುದು (ಐಪಿಸಿ 129(ಎ) ಹಾಗೂ ದ್ವೇಷ ಭಾವನೆ ಹೆಚ್ಚಿಸುವ (ಐಪಿಸಿ 153 (ಬಿ) ಆರೋಪದಡಿ ದೂರು ದಾಖಲಾಗಿದೆ.

ಲಾಕ್ ಡೌನ್ ವೇಳೆ ಬ್ರಾಹ್ಮಣರಿಗೆ ಪ್ರತ್ಯೇಕವಾಗಿ ಆಹಾರ ವಿತರಣೆ ಮಾಡಿದ ನಟರೊಬ್ಬರ ಬಗ್ಗೆ ಚೇತನ್ ಟೀಕಿಸಿದ್ದರು.