ಭ್ರಷ್ಟಾಸುರ ಬೊಮ್ಮಯಿ: ರಾಜ್ಯ ಬಿಜೆಪಿ ಸರ್ಕಾರದಿಂದ ಭ್ರಷ್ಟಾಚಾರದಲ್ಲಿ ಬ್ರ್ಯಾಂಡ್ ಕ್ರಿಯೆಟ್- ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು,ಫೆಬ್ರವರಿ,16,2023(www.justkannada.in): ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಬ್ರ್ಯಾಂಡ್ ಕ್ರಿಯೆಟ್ ಮಾಡಿದೆ. ಭ್ರಷ್ಟಾಸುರ ಬಸವರಾಜ ಬೊಮ್ಮಯಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ಸಾರ್ವಜನಿಕರ ತೆರಿಗೆ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರ ಪ್ರಣಾಳಿಕೆಯ 650 ಭರವಸೆಗಳನ್ನ ಈಡೇರಿಸುವ ಕೆಲಸ ಮಾಡಿಲ್.  ರೈತರ ಆದಾಯ ದ್ವಿಗುಣ ಮಾಡುವುದಾಗಿ ಹೇಳಿ ಮಾಡಿಲ್ಲ. ಮಹಿಳೆಯರ ಕಲ್ಯಾಣಕ್ಕಾಗಿ ಯಾವುದೇ ಯೋಜನೆ ಜಾರಿ ಮಾಡಿಲ್ಲ. ಯುವಕರಿಗೆ ರಾಜ್ಯ ಸರ್ಕಾರ ಉದ್ಯೋಗ ಕೊಡುವ ಕೆಲಸ ಮಾಡಿಲ್ಲ. ಆದರೆ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು.

Key words: Brand Creat- Corruption – State- BJP -Govt – Randeep Singh Surjewala