ರಾಜ್ಯ ಬಿಜೆಪಿ ಸರ್ಕಾರದ 100 ದಿನದ ಸಂಭ್ರಮಾಚರಣೆಗೆ ಬ್ರೇಕ್…

ಬೆಂಗಳೂರು,ಅ,29,2019(www.justkannada.in): ರಾಜ್ಯದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಪ್ರವಾಹ ಉಂಟಾದ ಹಿನ್ನೆಲೆ ಜನರ ಬದಕು ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ರಾಜ್ಯ ಸರ್ಕಾರ ತನ್ನ 100 ದಿನದ ಸಂಭ್ರಮಾಚರಣೆಯನ್ನ ಸರಳವಾಗಿ ಆಚರಿಸಿಕೊಳ್ಳಲು ನಿರ್ಧರಿಸಿದೆ.

ರಾಜ್ಯದಲ್ಲಿ ಪ್ರವಾಹದಿಂದಾಗಿ ನೆರೆ ಸಂತ್ರಸ್ತರ ಬದಕು ತತ್ತರಿಸಿದ್ದು ಇಂತಹ ಸಂದರ್ಭದಲ್ಲಿ ಸಂಭ್ರಮಾಚರಣೆ ಮಾಡಿದರೇ ಕೆಟ್ಟ ಹೆಸರು ಬರುತ್ತೆ. ಮತ್ತು ವಿಪಕ್ಷಗಳು ಮುಗಿಬೀಳುವ ಸಾಧ್ಯತೆ ಇದೆ. ಹೀಗಾಗಿ  ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ  100 ದಿನದ ಸಂಭ್ರಮಾಚರಣೆಗೆ ಬ್ರೇಕ್ ಹಾಕಿದೆ. .

ಇದೇ ತಿಂಗಳಿಗೆ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂದು 100 ದಿನವನ್ನು ಪೂರೈಸುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ 100 ದಿನ ಪೂರೈಸುತ್ತಿರುವುದನ್ನು ಅದ್ಧೂರಿಯಾಗಿ ಆಚರಿಸಲು ಮುಂದಾಗಿತ್ತು. ಆದರೆ ಈ ಬಗ್ಗೆ ಟೀಕೆ ವ್ಯಕ್ತವಾಗುವುದನ್ನ ಅರಿತ ಸಿಎಂ ಬಿಎಸ್ ವೈ ಸಂಭ್ರಮಾಚರಣೆ ಸರಳವಾಗಿ ಆಚರಿಸಲು ನಿರ್ಧರಿಸಿದ್ದಾರೆ. ಸರ್ಕಾರದ ಸಾಧನೆಯ ಪುಸ್ತಕವನ್ನ ಬಿಡುಗಡೆ ಮಾಡುವ ಮೂಲಕ 100 ದಿನದ ಸಂಭ್ರಮಾಚರಣೆ ಮಾಡಲು ಮುಂದಾಗಿದ್ದಾರೆ. ನವೆಂಬರ್ 5 ರಂದು ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Key words: Break -100-day celebration –bjp-state government.