ಲಂಚ ಪ್ರಕರಣ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ.

ಬೆಂಗಳೂರು,ಮಾರ್ಚ್,27,2023(www.justkannada.in):  ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ   ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಹಿನ್ನೆಲೆಯಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬಂಧನ ಭೀತಿ ಎದುರಾಗಿದೆ. ಮಾಡಾಳ್ ಅವರ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ನಂತರ ಮಾಡಾಳ್ ವಿರೂಪಾಕ್ಷಪ್ಪ ಅವರ ದಾವಣಗೆರೆ ನಿವಾಸದ ಮೇಲೂ ಲೋಕಾಯುಕ್ತ ದಾಳಿ ನಡೆದಿತ್ತು. ಅಲ್ಲಿಯೂ ಕೋಟ್ಯಂತರ ರೂ. ನಗದು ಪತ್ತೆಯಾಗಿತ್ತು. ಬಳಿಕ ನಾಪತ್ತೆಯಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ದೊರೆತ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು.

ಇದೀಗ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ.

Key words: Bribery –case- MLA -Modal Virupakshappa-anticipatory- bail -application -dismissed.