ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನ ವಾಪಸ್ ಕರೆತರಲು ಅಗತ್ಯ ಕ್ರಮ ಕೈಗೊಳ್ಳಿ- ಸಿಎಂಗೆ ಸಿದ್ಧರಾಮಯ್ಯ ಆಗ್ರಹ.

ಬೆಂಗಳೂರು,ಫೆಬ್ರವರಿ,25,2022(www.justkannada.in):  ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ಹಿನ್ನೆಲೆ ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರನ್ನ, ವಿದ್ಯಾರ್ಥಿಗಳನ್ನ ಕರೆತರಲು ಸಿಎಂ ಬಸವರಾಜ ಬೊಮ್ಮಾಯಿ ಅಗತ್ಯಕ್ರಮ ಕೈಗೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, ಯುಕ್ರೇನ್-ರಷ್ಯಾ ನಡುವಿನ ಸಂಘರ್ಷದಿಂದಾಗಿ ಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ಜನರನ್ನು ಮುಖ್ಯವಾಗಿ ವಿದ್ಯಾರ್ಥಿಗಳನ್ನು ವಾಪಸು ಕರೆತರಲು ಸಿಎಂ ಬೊಮ್ಮಾಯಿ  ಅವರು ಅಗತ್ಯ ಕ್ರಮ ಕೈಗೊಳ್ಳಬೇಕು. ಇವರ ಕುಟುಂಬದವರನ್ನು ಸಂಪರ್ಕಿಸಿ ಅವರಲ್ಲಿ ಭರವಸೆ ತುಂಬಬೇಕು.

ಯುಕ್ರೇನ್-ರಷ್ಯಾ ಸಂಘರ್ಷ ಅಂತಾರಾಷ್ಟ್ರೀಯ ವಿದ್ಯಮಾನವಾಗಿರುವ ಕಾರಣ ಕೇಂದ್ರ ಸರ್ಕಾರದ ನೆರವು-ಸಹಕಾರ ಅಗತ್ಯವಾದರೂ ಅವರ ಮೇಲಷ್ಟೆ ಜವಾಬ್ದಾರಿ ವಹಿಸಿ ಬಿಟ್ಟುಬಿಡಬಾರದು. ಈ ಬಿಕ್ಕಟ್ಟು ಪರಿಹಾರವಾಗುವವರೆಗೆ ಇದರ ನಿರ್ವಹಣೆಗೆ ಸಿಎಂ ಬೊಮ್ಮಾಯಿ ಅವರು ವಿಶೇಷ ಅಧಿಕಾರಿಯನ್ನು ನೇಮಿಸಬೇಕು ಎಂದು ಸಿದ್ಧರಾಮಯ್ಯ ಒತ್ತಾಯಿಸಿದ್ದಾರೆ.

Key words: bring back -students – Ukraine- Siddaramaiah