ನಾಲ್ಕರಿಂದ ಐದು ಶಾಸಕರಿಗೆ ಟಿಕೆಟ್ ಮಿಸ್: ರಾಜಕೀಯ ಅನುಭವದ ಆಧಾರದ ಮೇಲೆ ಬಿಎಸ್ ವೈ ಹೇಳಿದ್ದಾರೆ-ಸಿಎಂ ಬೊಮ್ಮಾಯಿ.

ಹುಬ್ಬಳ್ಳಿ,ಮಾರ್ಚ್,10,2023(www.justkannada.in):  ಈ ಬಾರಿ ನಾಲ್ಕರಿಂದ ಐದು ಹಾಲಿ ಶಾಸಕರಿಗೆ ಟಿಕೆಟ್ ಇಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಹೇಳಿಕೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,  ಸರ್ವೆ ಮೇಲೆ ಬಿಜೆಪಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ. ಬಿಎಸ್ ವೈ ರಾಜಕೀಯ ಅನುಭವದ ಆಧಾರದ ಮೇಲೆ ಹೇಳಿದ್ದಾರೆ ಎಂದರು.

ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಚುನಾವಣೆ ಹೊತ್ತಲ್ಲಿ ಅಲ್ಲಿಗೆ ಹೋಗುವುದು ಅಲ್ಲಿಂದ ಇಲ್ಲಿಗೆ ಬರುವುದು ಸಹಜ. ಬಿಜೆಪಿಗೂ ಕಾಂಗ್ರೆಸ್ ನಿಂದ ಬರಬಹುದು ಕಾದು ನೋಡಿ ಎಂದರು.

ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ,  ನಿನ್ನೆ ಸುಮಲತಾ ಅಂಬರೀಶ್  ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಈಗಾಗಲೇ ಹಲವು ಸುತ್ತಿನ ಮಾತುಕತೆಯಾಗಿದೆ.  ಇಂದು  ಅವರು ತಮ್ಮ ನಿರ್ಧಾರ ಪ್ರಕಟಿಸುತ್ತಾರೆ ಎಂದರು.

ಇನ್ನು ಜನಾರ್ಧನ ರೆಡ್ಡಿ ಬಿಜೆಪಿ ಸೇರ್ಪಡೆ ಬಗ್ಗೆ ಸದ್ಯ  ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ರೆಡ್ಡಿ ಬಿಜೆಪಿ ಸೇರುವ ಬಗ್ಗೆ ನಿರ್ಣಯ ಕೈಗೊಳ್ಳುತ್ತಾರೆ. ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿ ಅಮೇಲೆ ನೋಡೋಣ ಎಂದು ಸಿಎಂ ಬೊಮ್ಮಾಯಿ ಹೇಳಿದರು.

Key words:  BS Yeddyurappa – based -political experience – CM-Basavaraj Bommai.