Thursday, August 13, 2026

BDA Apartments

Home Front Page ಬಿಎಸ್ ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು? ಮಾಜಿ ಸಿಎಂ ಬೊಮ್ಮಾಯಿಗೆ ಸಂಸದ ಪ್ರತಾಪ್...

ಬಿಎಸ್ ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು? ಮಾಜಿ ಸಿಎಂ ಬೊಮ್ಮಾಯಿಗೆ ಸಂಸದ ಪ್ರತಾಪ್ ಸಿಂಹ ಪರೋಕ್ಷ ಟಾಂಗ್.

ಮೈಸೂರು,ಜೂನ್,16,2023(www.justkannada.in): ನಾನು ಹೊಂದಾಣಿಕೆ ರಾಜಕಾರಣ ಮಾಡಿಲ್ಲ,  ಹೊಂದಾಣಿಕೆ ರಾಜಕಾರಣ ಮಾಡುವ ಅವಶ್ಯಕತೆ ನನಗೆ ಇಲ್ಲ ಎಂದು ಹೇಳಿದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಸಂಸದ ಪ್ರತಾಪ್ ಸಿಂಹ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಂಸದ ಪ್ರತಾಪ್ ಸಿಂಹ,  ಬಿ.ಎಸ್.ಯಡಿಯೂರಪ್ಪ ತುಂಬಾ ಪ್ರಯತ್ನ ಮಾಡಿ ಬಿಜೆಪಿ ಸರ್ಕಾರ ತಂದರು. ಬಿ.ಎಸ್​​ ವೈ ಸಿಎಂ ಆದ ಕೂಡಲೇ ಪ್ರವಾಹ ಬಂದಿತ್ತು. ಆ ವೇಳೆ ಬಿ.ಎಸ್.ವೈ ಒಬ್ಬರೇ ಪ್ರವಾಹ ಪರಿಸ್ಥಿತಿ ನಿಭಾಯಿಸಿದ್ದರು. ಕೊವಿಡ್​ ವೇಳೆ ಜನರ ಪ್ರಾಣ ಉಳಿಸಲು BSY ಸರ್ಕಾರ ಪ್ರಯತ್ನಿಸಿತು. ಕಷ್ಟದ ಸಂದರ್ಭದಲ್ಲಿ ಯಡಿಯೂರಪ್ಪ ರಾಜ್ಯವನ್ನು ಕಾಪಾಡಿದರು. ಆದರೆ ಬಿ.ಎಸ್. ಯಡಿಯೂರಪ್ಪ ಬಳಿಕ ಅಧಿಕಾರಕ್ಕೆ ಬಂದವರು ಮಾಡಿದ್ದೇನು?  ಬಿಎಸ್​​ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು? ಕಾರ್ಯಕರ್ತರ ಇಚ್ಛೆಗೆ ತಕ್ಕಂತೆ ನಡೆದು ಕೊಂಡರಾ? ಎಂದು ಎಂದು  ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪರೋಕ್ಷವಾಗಿ ಪ್ರಶ್ನಿಸಿದರು.

ಪ್ರವೀಣ್ ನೆಟ್ಟಾರು, ಹರ್ಷ ಕೊಲೆಯಾದಾಗ ಸೂಕ್ತ ಕ್ರಮ ಕೈಗೊಳ್ಳಲಿಲ್ಲ. ಮತ್ತೆ ಅಧಿಕಾರಕ್ಕೆ ತರಬೇಕೆಂಬ ಉತ್ಸಾಹ ಅವರಲ್ಲಿ ಯಾಕೆ ಕಾಣಲಿಲ್ಲ? ಜನರ ಆಕ್ರೋಶ, ಕಾರ್ಯಕರ್ತರ ನೋವಿಗೆ ನಾನು ಧ್ವನಿಯಾಗಿದ್ದೇನೆ ಎಂದು ಪ್ರತಾಪ್ ​​ಸಿಂಹ ಕಿಡಿಕಾರಿದರು.

Key words: BS Yeddyurappa- Bavaraja bommai-BJP- MP Pratap Simha