ಬಿಎಸ್ ವೈಗೆ ನನ್ನ ಮೇಲೆ ಬಹಳ ಪ್ರೀತಿ: ಬಾದಾಮಿಯಿದ ಸ್ಪರ್ಧಿಸಿದ್ರೆ ಗೆದ್ಧೇ ಗೆಲ್ಲುತ್ತೇನೆ- ಮಾಜಿ ಸಿಎಂ ಸಿದ್ಧರಾಮಯ್ಯ.

ವಿಜಯಪುರ,ಫೆಬ್ರವರಿ,23,2023(www.justkannada.in):  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ನನ್ನ ಮೇಲೆ ಬಹಳ ಪ್ರೀತಿಯಿದೆ. ಹೀಗಾಗಿ ನನಗೆ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವಂತೆ ಹೇಳಿದ್ದಾರೆ. ನಾನು ಬಾದಾಮಿಯಿದ ಸ್ಪರ್ಧಿಸಿದ್ರೆ ಗೆದ್ಧೇ ಗೆಲ್ಲುತ್ತೇನೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ  ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಮಾಜಿ ಸಿಎಂ ಸಿದ್ಧರಾಮಯ್ಯ, ಬಿಎಸ್​​ ಯಡಿಯೂರಪ್ಪಗೆ  ದೇವರು ಆಯುಷ್ಯ, ಆರೋಗ್ಯ ಕೊಡಲೆಂದು ಪ್ರಾರ್ಥಿಸುತ್ತೇನೆ. ನಾನು ಬಾದಾಮಿ ಕ್ಷೇತ್ರದಿಂದ ಗೆಲ್ಲುವುದಿಲ್ಲ ಎಂದೇನಿಲ್ಲ. ಸ್ಪರ್ಧಿಸಿದರೆ ಗೆದ್ದೇ ಗೆಲ್ಲುತ್ತೇನೆ. ಬಾದಾಮಿ ಕ್ಷೇತ್ರದಲ್ಲಿ ನಾನು ನೂರಕ್ಕೆ ನೂರರಷ್ಟು ಗೆದ್ದೇ ಗೆಲ್ಲುತ್ತೇನೆ ಬಾದಾಮಿ ಜನರಿಗೆ ದ್ರೋಹ ಮಾಡುವ ಪ್ರಶ್ನೆಯೇ ಬರುವುದಿಲ್ಲ. ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ತೀರ್ಮಾನಿಸುವುದು ನನಗೆ ಬಿಟ್ಟ ವಿಚಾರ ಎಂದರು.

ನಿನ್ನೆ ವಿಧಾನಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ , ಇದು ನನ್ನ ಕೊನೆಯ ಅಧಿವೇಶನ. ಮುಂದೆ ನಾನು ಚುನಾವಣೆಗೆ ಸ್ಪರ್ಧಿಸಲ್ಲ, ಸದನಕ್ಕೆ ಬರುವುದಿಲ್ಲ ಎಂದು ಭಾವುಕರಾಗಿದ್ದರು. ನಂತರ ಸಿದ‍್ಧರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ಧ ಅವರು, ಸಿದ್ದರಾಮಯ್ಯಗೆ ಬಾದಾಮಿಯಲ್ಲಿ ಸ್ಪರ್ಧಿಸಿದರೆ ಗೆಲ್ಲುತ್ತೇನೆ ಎಂಬ ಧೈರ್ಯವಿಲ್ಲ. ಹೀಗಾಗಿ ಕೋಲಾರದತ್ತ ಮುಖ ಮಾಡಿದ್ದಾರೆ ಎಂದು ಟೀಕಿಸಿದ್ದರು.

Key words: BS Yeddyurappa – Former CM- Siddaramaiah- contest – Badami