Friday, October 16, 2026

Dasara Wishes

Happy Dasara
Home Front Page ಚುನಾವಣೆ ಘೋಷಣೆ ಬೆನ್ನಲ್ಲೆ ಅಮಿತ್ ಶಾ ಭೇಟಿ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಚುನಾವಣೆ ಘೋಷಣೆ ಬೆನ್ನಲ್ಲೆ ಅಮಿತ್ ಶಾ ಭೇಟಿ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ನವದೆಹಲಿ, ಸೆಪ್ಟೆಂಬರ್ 22, 2019 (www.justkannada.in):ಅನರ್ಹ ಶಾಸಕರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ದಿಲ್ಲಿಯಲ್ಲಿ ಅಮಿತ್ ಶಾ ಭೇಟಿ ಮಾಡಿ ಚರ್ಚಿಸಿದ್ದಾರೆ.

ಭೇಟಿ ಬಳಿಕ ಸಿಎಂ ಬಿ.ಎಸ್.ಯಡಿಯೂರಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಇದುವರೆಗೆ ಪ್ರವಾಹ ಪರಿಹಾರ ಮೊದಲ ಕಂತಿನ ಹಣ ಬಿಡುಗಡೆ ಆಗಿಲ್ಲ. ಪರಿಹಾರ ಕಾರ್ಯ ಆರಂಭಿಸಲು ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ.

2000 ಕೋಟಿ ಹಣಕ್ಕೆ ಮನವಿ ಮಾಡಿದೆ. ಅವರೇ ಬಂದು ಖುದ್ದು ಪರಿಸ್ಥಿತಿ ನೋಡಿದ್ದಾರೆ. ಪರಿಶೀಲನೆ ನಡೆಸಿ ಎರಡು ಮೂರು ದಿನದಲ್ಲಿ ಬಿಡುಗಡೆ ಆಗಲಿದೆ. ಪ್ರವಾಹ ಸ್ಥಳಗಳಿಗೆ ಹಣ ಬಿಡುಗಡೆ ಚುನಾವಣೆ ನೀತಿ ಸಂಹಿತಿ ಅಡಿಯಾಗಲ್ಲ. ಪ್ರಧಾನಿ ಬಂದ ಬಳಿಕ ಚರ್ಚೆ ಮಾಡಿ ಹಣ ಬಿಡುಗಡೆ ಮಾಡ್ತುವ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ತೇಜಸ್ವಿ ಸೂರ್ಯ ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ಆ ರೀತಿ ಮಾತನಾಡಬಾರದು ನಾನು ಅವರ ಜೊತೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಆದರೆ ಅನರ್ಹ ಶಾಸಕರ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.