ಬಿಎಸ್ ವೈ ಭೇಟಿಯಾಗಿ ಪುತ್ರನಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ ಸಚಿವ ಎಂಟಿಬಿ ನಾಗರಾಜ್.

ಬೆಂಗಳೂರು,ಏಪ್ರಿಲ್,7,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಈ ನಡುವೆ  ಸಚಿವ ಎಂಟಿಬಿ ನಾಗರಾಜ್ ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸಲು ಲಾಬಿ ನಡೆಸುತ್ತಿದ್ದಾರೆ.

ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರನ್ನ ಭೇಟಿಯಾದ ಸಚಿವ ಎಂ.ಟಿಬಿ ನಾಗರಾಜ್  ಪುತ್ರನಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದರು.

ಬಿಎಸ್ ವೈ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಎಂಟಿಬಿ ನಾಗರಾಜ್, ಮಗನಿಗೆ ಟಿಕೆಟ್ ನೀಡುವಂತೆ ಬಿಎಸ್ ಯಡಿಯೂರಪ್ಪರಿಗೆ ಮನವಿ ಮಾಡಿದ್ದೇನೆ. ಕೋರ್ ಕಮಿಟಿ ಸಭೆಯಲ್ಲೂ ಚರ್ಚೆ ಮಾಡಿದ್ದೇನೆ. ನಾನು ಈ ಬಾರಿ ನಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ಹೊಸಕೋಟೆಯಿಂದ ನನ್ನ ಮಗನಿಗೆ ಟಿಕೆಟ್ ನೀಡಲಿದ್ದಾರೆ.  ಈ ಬಾರಿ ನನ್ನ ಮಗ ಗೆಲ್ಲುತ್ತಾನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Key words: BS yeddyurappa- Minister- MTB Nagaraj – requested – ticket – son