ಗಾದಿ ತ್ಯಜಿಸುವ ವೇಳೆ ಗದ್ಗದಿತರಾದ ಬಿಎಸ್ ವೈ.

ಬೆಂಗಳೂರು,ಜುಲೈ,26,2021(www.justkannada.in):  ಸಿಎಂ ಬದಲಾವಣೆ ವಿಚಾರಕ್ಕೆ ಕೊನೆಗೂ ತೆರೆಬಿದ್ದಿದ್ದು, ಸಿಎಂ  ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯುತ್ತಿರುವ ಸರ್ಕಾರದ 2ನೇ ವರ್ಷದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಭಾವುಕರಾಗಿಯೇ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದರು.

ಊಟದ ಬಳಿಕ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ  ರಾಜೀನಾಮೆ ನೀಡುವುದಾಗಿ ತಿಳಿಸಿದ ಸಿಎಂ ಬಿಎಸ್ ಯಡಿಯೂರಪ್ಪ ದುಃಖದಿಂದಲ್ಲ ಸಂತೋಷದಿಂದ ರಾಜೀನಾಮೆ ನೀಡುವುದಾಗಿ ಗದ್ಗದಿತರಾದರು.

Key words: BS Yediyurappa- announces – resignation – Karnataka chief minister.

 

BS Yediyurappa announces his resignation as Karnataka chief minister.

I have decided to resign. I will meet the Governor after lunch: Karnataka CM BS Yediyurappa at a programme to mark the celebration of 2 years of his govt