20 ದಿನಗಳಿಂದ ಪಾಕ್ ವಶದಲ್ಲಿದ್ದ `BSF’ ಯೋಧ ಭಾರತಕ್ಕೆ ವಾಪಸ್

ನವದೆಹಲಿ,ಮೇ,14,2025 (www.justkannada.in):  ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಮತ್ತೊಂದು ಜಯ ಸಿಕ್ಕಿದ್ದು, ಆಕಸ್ಮಿಕವಾಗಿ ಗಡಿ ದಾಟಿ ಪಾಕಿಸ್ತಾನದ ಸೇನೆಯಿಂದ ಬಂಧನಕ್ಕೊಳಗಾಗಿದ್ದ ಬಿಎಸ್ ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನ ಬಿಡುಗಡೆ ಮಾಡಿದೆ.

2025 ರ ಏಪ್ರಿಲ್ 23 ರಿಂದ ಪಾಕಿಸ್ತಾನ ರೇಂಜರ್ಸ್ ವಶದಲ್ಲಿದ್ದ ಬಿಎಸ್‌ಎಫ್  ಪೂರ್ಣಮ್ ಕುಮಾರ್ ಶಾ ಅವರನ್ನು ಇಂದು ಭಾರತಕ್ಕೆ ಹಸ್ತಾಂತರಿಸಲಾಗಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ಭೂಪ್ರದೇಶಕ್ಕೆ ಬಿಎಸ್‌ಎಫ್ ಕಾನ್‌ಸ್ಟೆಬಲ್ ಆಕಸ್ಮಿಕವಾಗಿ ದಾಟಿಹೋಗಿದ್ದು ರಾಜತಾಂತ್ರಿಕ ಅಂತ್ಯವಾಗಿದೆ, ಪಾಕಿಸ್ತಾನ ರೇಂಜರ್‌ಗಳು ಭಾರತೀಯ ಪಡೆಗಳೊಂದಿಗಿನ ಎಲ್ಲಾ ಧ್ವಜ ಸಭೆಗಳನ್ನು ಸ್ಥಗಿತಗೊಳಿಸಿದ್ದು, ಕಳದ 20 ದಿನಗಳಿಂದ ಪಾಕ್ ವಶದಲ್ಲಿದ್ದ ಬಿಎಸ್ ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರು ಭಾರತಕ್ಕೆ ಮರಳಿದ್ದಾರೆ.

ಪಂಜಾಬ್ ನ ಫಿರೋಜ್ ಪುರದಲ್ಲಿ ಕರ್ತವ್ಯದಲ್ಲಿದ್ದ ಬಿಎಸ್ ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅಂತರಾಷ್ಟ್ರೀಯ ಗಡಿ ದಾಟಿದ್ದು, ಇದೇ ವೇಳೆ ಪಾಕಿಸ್ತಾನ ರೇಂಜರ್ ಗಳು ಅವರನ್ನು ವಶಕ್ಕೆ ಪಡೆದಿದ್ದರು.  ಇದೀಗ ಅಟಾರಿ ಗಡಿ ಮೂಲಕ ಯೋಧ ಬಾರತಕ್ಕೆ ವಾಪಸ್ ಆಗಿದ್ದಾರೆ.

Key words: BSF, soldier, Pakistan, custody, returns, India