ಪೋಕ್ಸೋ ಪ್ರಕರಣದಲ್ಲಿ ಬಿಎಸ್ ವೈ ಬಂಧಿಸುವ ಸಾಧ್ಯತೆ ಇದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ತುಮಕೂರು,ಜೂನ್,13,2024 (www.justkannada.in): ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಂಧನ ಭೀತಿ ಎದುರಾಗಿದೆ. ಹೌದು ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪೋಕ್ಸೋ ಪ್ರಕರಣದಲ್ಲಿ ಬಿಎಸ್ ವೈ ಬಂಧಿಸುವ ಸಾಧ್ಯತೆ ಇದೆ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ. ಬಿಎಸ್ ವೈಗೆ ಸಿಐಡಿನವರು ನೋಟಿಸ್ ಕೊಟ್ಟಿದ್ದಾರೆ ಪೊಲೀಸರು ತನಿಖೆ ಮಾಡ್ತಿದ್ದಾರೆ. ಯಡಿಯೂರಪ್ಪ ಬಂದು ನೋಟಿಸ್​ಗೆ ಉತ್ತರ ನೀಡಬೇಕಾಗುತ್ತದೆ ಎಂದರು.

ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ಚಾರ್ಜ್​ಶೀಟ್ ಸಲ್ಲಿಸಬೇಕು ಎಂದು ಇದೆ. ಹೀಗಾಗಿ ಯಡಿಯೂರಪ್ಪನವರಿಗೆ ನೋಟಿಸ್ ಕೊಟ್ಟಿದ್ದಾರೆ. ಅಗತ್ಯವಿದ್ದರೇ ಸಿಐಡಿಯವರು ಯಡಿಯೂರಪ್ಪರನ್ನ ಬಂಧಿಸುತ್ತಾರೆ. ಈ ಬಗ್ಗೆ ನಾನು ಏನೂ ಹೇಳಲು ಆಗದು ಎಂದು ಪರಮೇಶ್ವರ್ ತಿಳಿಸಿದರು.

Key words: BSY, POCSO, case, Home Minister, Parameshwar