ಆಡಳಿತ ದುರುಪಯೋಗ ಮಾಡಿ ಬಿಎಸ್ ವೈ ವಿರುದ್ದ ಷಡ್ಯಂತ್ರ-ಕಾಂಗ್ರೆಸ್ ವಿರುದ್ದ ಪ್ರಹ್ಲಾದ್ ಜೋಶಿ ವಾಗ್ದಾಳಿ.

ಹುಬ್ಬಳ್ಳಿ, ಜೂನ್,14,2024 (www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ದ ಪೋಕ್ಸೋ ಪ್ರಕರಣದಲ್ಲಿ ವಾರೆಂಟ್ ಜಾರಿ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ಕಾಂಗ್ರೆಸ್ ನವರು ಆಡಳಿತ ದುರುಪಯೋಗ ಮಾಡಿ ಬಿಎಸ್ ವೈ ವಿರುದ್ದ ಷಡ್ಯಂತ್ರ ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಕುರಿತು  ಟ್ವೀಟ್ ಮಾಡಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಲೋಕಸಭೆ ಚುನಾವಣೆಯಲ್ಲಿ ಸೋಲುಂಡು ಜೀರ್ಣಿಸಿಕೊಳ್ಳಲಾಗದೇ ಆಡಳಿತ ದುರುಪಯಗ ಮಾಡಿಕೊಂಡು ಕಾಂಗ್ರೆಸ್ ಷಡ್ಯಂತ್ರ ಮಾಡುತ್ತಿದೆ. ಆಕೆ ಮಾನಸಿಕ ಅಸ್ವಸ್ಥಳು ದುರುದ್ದೇಶದಿಂದ ಕೇಸ್ ದಾಖಲಿಸಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ‍ಗೆ ಲೋಕಸಭೆ ಚುನಾವಣೆ ಸೋಲನ್ನು ಅರಗಿಸಿಕೊಳ್ಳಲಾಗಿಲ್ಲ. ಹೀಗಾಗಿ ಮಾಜಿ ಸಿಎಂ ಬಿ.ಎಸ್‌‍.ಯಡಿಯೂರಪ್ಪ ಅವರ ಮೇಲೆ ರಾಜಕೀಯ ವೈಷಮ್ಯ ತೋರುತ್ತಿದೆ ಎಂದು ಕಿಡಿಕಾರಿದರು.

ಮೂರ್ನಾಲ್ಕು ತಿಂಗಳ ಹಿಂದೆ ಮಾಜಿ ಸಿಎಂ ಬಿ.ಎಸ್‌‍.ವೈ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ ಮಹಿಳೆ ಮಾನಸಿಕ ಅಸ್ವಸ್ಥಳು, ದುರುದ್ದೇಶದಿಂದ ದೂರು ನೀಡಿದ್ದಾಳೆ ಎಂದು ಆಗಲೇ ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ. ಆ ಮಹಿಳೆ ಈಗಾಗಲೇ ಐಎಎಸ್‌‍, ಐಪಿಎಸ್‌‍ ಅಧಿಕಾರಿಗಳು ಸೇರಿದಂತೆ ರಾಜಕಾರಣಿಗಳ ಮೇಲೆ 60ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾಳೆ ಎಂದೂ ಗೃಹಮಂತ್ರಿಗಳೇ ಖುದ್ದಾಗಿ ಈ ಹಿಂದೆ ಹೇಳಿದ್ದರು. ಆದರೆ ಈಗ ಚುನಾವಣೆ ಮುಗಿದ ಮೇಲೆ ರಾಜ್ಯ ಕಾಂಗ್ರೆಸ್‌‍ ನಾಯಕರು ಹೊಸ ಡ್ರಾಮಾ ಶುರು ಮಾಡಿದ್ದಾರೆ. ಈಗ ತಮ ದುರಾಡಳಿತವನ್ನು ಮರೆಮಾಚಲು ಬಿಜೆಪಿ ವರಿಷ್ಠ ಬಿಎಸ್‌‍ವೈ ಅವರನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಎಂದು ಪ್ರಹ್ಲಾದ್ ಜೋಶಿ ಹರಿಹಾಯ್ದಿದ್ದಾರೆ.

Key words: BSY, Prahlad Joshi, against, Congress