Saturday, September 12, 2026

BDA Apartments

ಕೇಂದ್ರದಿಂದ ಮಲತಾಯಿ ಧೋರಣೆ: ರಾಜ್ಯದ ಬೆಳವಣಿಗೆ ಪ್ರಮಾಣ ಕಡಿಮೆಯಾಗಿದೆ- ಸಿಎಂ...
Home Front Page ಕೇಂದ್ರದಿಂದ ಮಲತಾಯಿ ಧೋರಣೆ: ರಾಜ್ಯದ ಬೆಳವಣಿಗೆ ಪ್ರಮಾಣ ಕಡಿಮೆಯಾಗಿದೆ- ಸಿಎಂ ಸಿದ್ದರಾಮಯ್ಯ

ಕೇಂದ್ರದಿಂದ ಮಲತಾಯಿ ಧೋರಣೆ: ರಾಜ್ಯದ ಬೆಳವಣಿಗೆ ಪ್ರಮಾಣ ಕಡಿಮೆಯಾಗಿದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,6,2026 (www.justkannada.in):  ಕೇಂದ್ರ ಸರ್ಕಾರ ಜಿ.ಎಸ್ ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ. ರಾಜ್ಯದ ಬೆಳವಣಿಗೆ ಪ್ರಮಾಣ ಶೇ.4ರಷ್ಟು ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ದೂರಿದರು.

ಇಂದು 2026-27ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ 2026-27ನೇ ಸಾಲಿನ ಮುಂಗಡ ಪತ್ರ ಮಂಡಿಸಿದ್ದೇನೆ. ರಾಜ್ಯದ ಅಭಿವೃದ್ದಿ ಪೂರಕವಾದ ಬಜೆಟ್ ಮಂಡಿಸಿದ್ದೇನೆ. ಪ್ರಸಕ್ತ ವರ್ಷ 4.48 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದ್ದೇನೆ  ಕಳೆದ ಬಾರಿ 4.09 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಲಾಗಿತ್ತು ಕಳೆದ ವರ್ಷಕ್ಕಿಂತ  38,455 ಕೋಟಿ ರೂ. ಹೆಚ್ಚಾಗಿದೆ ಎಂದರು.

ಕೇಂದ್ರ ಸರ್ಕಾರ ಜಿಎಸ್ ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಪ್ರಮಾಣ ಶೇ.4ರಷ್ಟು ಕಡಿಮೆಯಾಗಿದೆ.  ಕೆಲ ರಾಜ್ಯಗಳು ಇನ್ನೂ ಚೇತರಿಕೊಂಡಿಲ್ಲ ಮೈನಸ್ ಗ್ರೋತ್ ನಲ್ಲಿವೆ.  ಆದರೂ ಜಿಎಸ್ ಟಿ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಮಹಾರಾಷ್ಟ ನಂಬರ್ ಒನ್ ಇದೆ ಎಂದರು.

ಕೇಂದ್ರ ಸರ್ಕಾರ ಅಸಹಕಾರ  ಮಲತಾಯಿ ಧೋರಣೆ ತೋರುತ್ತಿದೆ. ರಾಜ್ಯಕ್ಕೆ ಬರಬೇಕಿದ್ದ ಪಾಲು 10,000 ಕೋಟಿ ರೂ. ಕಡಿಮೆಯಾಗಿದೆ.  ಮುಂದೆ ಇದು 15 ಸಾವಿರ ಕೋಟಿ ರೂ.  ಕಡಿಮೆಯಾಗುತ್ತೆ ಆದರೆ ನಾವು ವಿತ್ತೀಯ ಶಿಸ್ತು ಉಲ್ಲಂಘನೆ ಮಾಡಿಲ್ಲ  ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: budget, CM Siddaramaiah, Central government