Tuesday, August 4, 2026

BDA Apartments

Home Front Page ಜ.31 ರಿಂದ ಸಂಸತ್ತಿನ ಬಜೆಟ್ ಅಧಿವೇಶನ: ಫೆ.1 ರಂದು ಬಜೆಟ್ ಮಂಡನೆ.

ಜ.31 ರಿಂದ ಸಂಸತ್ತಿನ ಬಜೆಟ್ ಅಧಿವೇಶನ: ಫೆ.1 ರಂದು ಬಜೆಟ್ ಮಂಡನೆ.

ನವದೆಹಲಿ,ಜನವರಿ,14,2022(www.justkannada.in):  ಜನವರಿ 31 ರಿಂದ ಸಂಸತ್ತಿನ ಬಜೆಟ್ ಅಧಿವೇಶನ ನಡೆಯಲಿದ್ದು ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಜನವರಿ 31ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ. ಫೆಬ್ರವರಿ 1ರಂದು ಕೇಂದ್ರ ಬಜೆಟ್ ಸಂಸತ್ ನಲ್ಲಿ ಮಂಡನೆಯಾಗಲಿದೆ. ಆ ಬಳಿಕ ಬಜೆಟ್ ಮೇಲೆ ಚರ್ಚೆ ನಡೆಯಲಿದೆ.

ಈ ಕುರಿತು ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಈ ವರ್ಷದ ಸಂಸತ್ ಬಜೆಟ್ ಅಧಿವೇಶನವು ಜನವರಿ 31ರಂದು ಆರಂಭಗೊಳ್ಳಲಿದೆ. ಬಜೆಟ್ ಅಧಿವೇಶನದ ಮೊದಲ ದಿನ ರಾಷ್ಟ್ರಪತಿ ರಾಮಾನಾಥ್ ಕೋವಿಂದ್ ಅವರು ಸದನವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮಾರ್ಚ್ 14ರಿಂದ ಬಜೆಟ್ ಅಧಿವೇಶನದ 2ನೇ ಭಾಗ ನಡೆಯಲಿದ್ದು,  ಏಪ್ರಿಲ್ 8ರಂದು ಸಂಸತ್ ಬಜೆಟ್ ಅಧಿವೇಶನ ಅಂತ್ಯವಾಗಲಿದೆ.

Key words: Budget Session – Parliament – January 31