“ಹೊಸ ಯುಗ ಸೃಷ್ಟಿಸುವ ಬಜೆಟ್‌” : ಸಚಿವ ಜಗದೀಶ್‌ ಶೆಟ್ಟರ್‌

ಬೆಂಗಳೂರು,ಜನವರಿ,01,2021(www.justkannada.in) : ಕೇಂದ್ರ ಸರಕಾರ ಕೋವಿಡ್‌ ನಂತರದ ಆರ್ಥಿಕತೆಗೆ ಉತ್ತೇಜನ ನೀಡಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿರುವುದು ಇಂದಿನ ಕೇಂದ್ರ ಬಜೆಟ್ ನಲ್ಲಿ ಕಾಣಬಹುದಾಗಿದೆ. ಹೊಸ ದಶಕದಲ್ಲಿ ಹೊಸ ಯುಗ ಸೃಷ್ಟಿಸುವ ಬಜೆಟ್‌ ಇದಾಗಿದ್ದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಪ್ರತಿಕ್ರಿಯಿಸಿದ್ದಾರೆ.jk

ಕೇಂದ್ರ ಆಯವ್ಯಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪ್ರಗತಿಪರ ಹಾಗೂ ಕೋವಿಡ್‌ ಸಂಕಷ್ಟದಿಂದ ದೇಶವನ್ನು ಪ್ರಗತಿಯತ್ತ ಮುನ್ನಡೆಸಲು ಉತ್ತಮ ಹಾದಿಯನ್ನು ಈ ಬಾರಿಯ ಬಜೆಟ್‌ ನಲ್ಲಿ ಕೇಂದ್ರ ವಿತ್ತೀಯ ಸಚಿವರು ತೋರಿಸಿದ್ದಾರೆ ಎಂದರು.

ಆರೋಗ್ಯ, ಎಂಎಸ್‌ಎಂಇ, ಸ್ಟಾರ್ಟ್‌ ಅಪ್‌ ಕ್ಷೇತ್ರಗಳಲ್ಲಿ ಹೆಚ್ಚಿನ ಅಭಿವೃದ್ದಿಗೆ ಕೇಂದ್ರ ಆಯವ್ಯಯ ಮುನ್ನಡಿ ಬರೆದಿದೆ. ಎಂಎಸ್‌ಎಂಇ ಗಳೀಗೆ 15,700 ಕೋಟಿಗಳ ಅನುದಾದ ನೀಡಲಾಗಿದ್ದು, 2 ಪಟ್ಟು ಹೆಚ್ಚು ನೀಡಲಾಗಿದೆ. ಈ ಕ್ಷೇತ್ರದ ಅಭಿವೃದ್ದಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಾಯವನ್ನು ನೀಡಲು ಕೇಂದ್ರ ಸರಕಾರ ಮುಂದಾಗಿದೆ ಎಂದು ಹೇಳಿದ್ದಾರೆ.Budget,Create,New,Age,Minister,Jagdish Shetter

ಸಣ್ಣ ಕಂಪನಿಗಳ ವ್ಯಾಖ್ಯಾನ ಬದಲು ಮಾಡುವ ಮೂಲಕ ಸುಮಾರು 2 ಲಕ್ಷ ಕಂಪನಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ. ಏಕವ್ಯಕ್ತಿ ಕಂಪನಿಗಳ ಸ್ಥಾಪನೆಗೂ ಪ್ರೋತ್ಸಾಹ ನೀಡಲಾಗಿದೆ. ಕನಿಷ್ಟ ಕೂಲಿಯನ್ನು ಎಲ್ಲಾ ವಿಭಾಗದ ಕೂಲಿ ಕಾರ್ಮಿಕರಿಗೂ ಅನ್ವಯ ಮಾಡಿರುವುದು ಹಾಗೂ ಮಹಿಳೆಯರು 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿರುವುದು ಸಂತಸದ ವಿಷಯ ಎಂದು ಪ್ರತಿಕ್ರಿಯಿಸಿದ್ದಾರೆ.

key words : Budget-Create-New-Age-Minister-Jagdish Shetter