“ಬಜೆಟ್ ಅನುದಾನಕ್ಕೋಸ್ಕರ ಜನಪ್ರತಿನಿಧಿಗಳ ಪೂರ್ವಭಾವಿ ಸಭೆ”: ಸಚಿವರ ಕಾರ್ಯಕ್ಕೆ ಸಂಸದ ಪ್ರತಾಪ್ ಸಿಂಹ ಶ್ಲಾಘನೆ

ಮೈಸೂರು,ಜನವರಿ,25,2021(www.justkannada.in) : ಬಜೆಟ್ ಬಗ್ಗೆ ಪ್ರತಿ ಜಿಲ್ಲೆಗಳಲ್ಲೂ ನಿರೀಕ್ಷೆಗಳು ಇದ್ದೇ ಇರುತ್ತವೆ. ಹೀಗಾಗಿ, ಒಂದು ಜಿಲ್ಲೆಯ ಅಭಿವೃದ್ಧಿಗೆ ಏನು ಬೇಕು ಎಂಬ ಸ್ಥಳೀಯ ಸಂಸದರು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳ ಸಭೆ ಕರೆಯಲಾಗಿರುವುದು ಇದೇ ಮೊದಲು ಎಂದು ಸಂಸದ ಪ್ರತಾಪ್ ಸಿಂಹ ಶ್ಲಾಘಿಸಿದರು.jkಸುಯೋಗ್ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ಉಚಿತ ಹೃದ್ರೋಗ ಹಾಗೂ ಆ್ಯಂಜಿಯೋಪ್ಲಾಸ್ಟಿ ತಪಾಸಣಾ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮೈಸೂರು ಜಿಲ್ಲೆ ಬಗ್ಗೆ ಅಪಾರ ಪ್ರೀತಿಯನ್ನು ಇಟ್ಟುಕೊಂಡಿದ್ದಾರೆ. ಅವರು ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಮೈಸೂರು ಅಭಿವೃದ್ಧಿಗೆ ಏನೆಲ್ಲ ಬೇಕು ಎಂಬ ನಿಟ್ಟಿನಲ್ಲಿ ಜನಪ್ರತಿನಿಧಿಗಳ ಸಭೆಯನ್ನು ಕರೆದು, ಎಲ್ಲರನ್ನೂ ವಿಶ್ವಾಸಕ್ಕೆ ಪಡೆಯುತ್ತಿದ್ದಾರೆ ಎಂದರು. budget-grants-Preliminary-Meeting-Representatives-work-Minister-MP Pratap simha-Appreciation

ಸಭೆಯಲ್ಲಿ ಚರ್ಚಿತವಾದ ಅಂಶಗಳ ಸಹಿತ ಮೈಸೂರಿನ ಸಮಗ್ರ ಅಭಿವೃದ್ಧಿಗೆ ಬೇಕಿರುವ ಯೋಜನೆಗಳ ಪಟ್ಟಿ ಸಿದ್ಧಪಡಿಸಿ ಮುಖ್ಯಮಂತ್ರಿಗಳಿಗೆ ಸಲ್ಲಿಸುವ ತೀರ್ಮಾನ ಮಾಡಿದ್ದಾರೆ. ಹೀಗೆ ಉಸ್ತುವಾರಿ ಸಚಿವರೊಬ್ಬರು ಬಜೆಟ್ ಹಿನ್ನೆಲೆ ಜನಪ್ರತಿನಿಧಿಗಳ ಸಭೆ ಕರೆಯುತ್ತಿರುವುದು ಇದೇ ಮೊದಲು ಎಂದು ತಿಳಿಸಿದರು.

key words : budget-grants-Preliminary-Meeting-Representatives-work-Minister-MP Pratap simha-Appreciation