ಬಸ್ ದುರಂತ: ಪ್ರಧಾನಿ ಮೋದಿ ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ

ನವದೆಹಲಿ,ಅಕ್ಟೋಬರ್,24,2025 (www.justkannada.in): ಆಂಧ್ರ ಪ್ರದೇಶದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್  ಆಂಧ್ರಪ್ರದೇಶದ ಕರ್ನೂಲ್‌ ಹೆದ್ದಾರಿಯಲ್ಲಿ ಬೆಂಕಿ ಹೊತ್ತಿಕೊಂಡು 20ಕ್ಕೂ ಹೆಚ್ಚು ಮಂದಿ ಸಜೀವ ದಹನರಾಗಿದ್ದು, ಈ ಘಟನೆ ಬಗ್ಗೆ  ಪ್ರಧಾನಿ  ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು  ಟ್ವಿಟ್ಟರ್ ನಲ್ಲಿ ಪೋಸ್ಟ್‌  ಮಾಡಿ ಪ್ರಧಾನಿ ಮೋದಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಇಂತಹ ಕಷ್ಟದ ಸಮಯದಲ್ಲಿ ಸಂತ್ರಸ್ತರ ಕುಟುಂಬಗಳ ಜತೆ ನಾವಿದ್ದೇವೆ. ಘಟನೆಯಲ್ಲಿ ಗಾಯಗೊಂಡಿರುವ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವುದಾಗಿ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ದುರಂತದಲ್ಲಿ ಮೃತಪಟ್ಟವರರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ ₹50 ಸಾವಿರ  ನೀಡಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ.

Key words: Bus accident, PM Modi, condolences, Rs 2 lakh, compensation