ನವದೆಹಲಿ, ಡಿಸೆಂಬರ್, 25,2025 (www.justkannada.in): ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಜವನಗೊಂಡಹಳ್ಳಿ ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ ತಲಾ 2 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ.
ಈ ಬಗ್ಗೆ ಪ್ರಧಾನಿ ಕಾರ್ಯಾಲಯ ಎಕ್ಸ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, ‘ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ’ ಎಂದು ತಿಳಿಸಿದೆ.
‘ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್)ಯಿಂದ 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು’ ಎಂದು ಪ್ರಧಾನಿ ತಿಳಿಸಿದ್ದಾರೆ.
Key words: Chitradurga, bus accident, PM Modi, Rs 2 lakh, compensation







