Thursday, August 13, 2026

BDA Apartments

Home Front Page ಬಸ್ ಪ್ರಯಾಣ ದರ ಏರಿಕೆ: ಸ್ಪಷ್ಟನೆ ನೀಡಿದ ಡಿಸಿಎಂ ಲಕ್ಷ್ಮಣ ಸವದಿ

ಬಸ್ ಪ್ರಯಾಣ ದರ ಏರಿಕೆ: ಸ್ಪಷ್ಟನೆ ನೀಡಿದ ಡಿಸಿಎಂ ಲಕ್ಷ್ಮಣ ಸವದಿ

ಬೆಂಗಳೂರು, ಜೂನ್ 09, 2021 (www.justkannada.in): ಲಾಕ್ ಡೌನ್ ನಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ಜನರಿಗೆ ಮತ್ತೊಂದು ಬರೆ ಎಳೆಯೋದಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.

ಸದ್ಯಕ್ಕೆ ಬಿಎಂಟಿಸಿ, ಕೆ ಎಸ್ ಆರ್ ಟಿ ಸಿ ಬಸ್ ಟಿಕೆಟ್ ದರ ಹೆಚ್ಚಳ ಇಲ್ಲ ಎಂಬುದಾಗಿ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

ವಿಧಾನಸೌಧದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈಗಾಗಲೇ ಲಾಕ್ ಡೌನ್ ನಿಂದಾಗಿ ರಾಜ್ಯದ ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸಾರಿಗೆ ಬಸ್ ನಲ್ಲಿ ಪ್ರಯಾಣಿಸುವವರು ಬಡ ಪ್ರಯಾಣಿಕರಾಗಿದ್ದಾರೆ. ಹೀಗಾಗಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂದು ಸವದಿ ತಿಳಿಸಿದ್ದಾರೆ.additional -1500 buses- No increase - ticket prices - KSRTC MD- shivayogi kalasad