Wednesday, November 4, 2026

Dasara Wishes

Happy Dasara
Home Front Page ಕೇಂದ್ರ ಪೆಟ್ರೋಲ್, ಡೀಸೆಲ್ ದರ ಇಳಿಸಿದರೆ ರಾಜ್ಯದಲ್ಲಿ ಬಸ್ ಪ್ರಯಾಣ ದರ ಕಡಿಮೆ ಮಾಡಲು ಸಿದ್ಧ:...

ಕೇಂದ್ರ ಪೆಟ್ರೋಲ್, ಡೀಸೆಲ್ ದರ ಇಳಿಸಿದರೆ ರಾಜ್ಯದಲ್ಲಿ ಬಸ್ ಪ್ರಯಾಣ ದರ ಕಡಿಮೆ ಮಾಡಲು ಸಿದ್ಧ: ಸಿಎಂ ಡಿ.ಕೆ ಶಿವಕುಮಾರ್

ಕೇಂದ್ರ ಪೆಟ್ರೋಲ್, ಡೀಸೆಲ್ ದರ ಇಳಿಸಿದರೆ ರಾಜ್ಯದಲ್ಲಿ ಬಸ್ ಪ್ರಯಾಣ ದರ ಕಡಿಮೆ ಮಾಡಲು ಸಿದ್ಧ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ನವೆಂಬರ್, 4,2026 (www.justkannada.in): “ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸಿದರೆ ಅದಕ್ಕೆ ಅನುಗುಣವಾಗಿ ರಾಜ್ಯದಲ್ಲೂ ಬಸ್ ಪ್ರಯಾಣ ದರ ಕಡಿಮೆ ಮಾಡಲು ಸಿದ್ಧ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಪ್ರತಿಪಕ್ಷಗಳು ಗುರುವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿರುವ ಕುರಿತು ಕೇಳಿದಾಗ, “ಸಾರಿಗೆ ಸಂಸ್ಥೆಗಳು ನಷ್ಟದಲ್ಲಿವೆ. ಮೂರು ವಾರ ಅಥವಾ ಹತ್ತು ದಿನಗಳ ಮುಂಚಿತವಾಗಿಯೇ ಡೀಸೆಲ್ ಖರೀದಿಸಲು ಹಣವಿಲ್ಲದ ಪರಿಸ್ಥಿತಿ ಎದುರಾಗಿತ್ತು. ಸರಕಾರವೇ ಹಣ ನೀಡಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸಿರುವುದರಿಂದ ಸಾರಿಗೆ ಸಂಸ್ಥೆಗಳ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಬಿದ್ದಿದೆ. ಹೀಗಾಗಿ ಒಂದೊಂದು ಹಂತದಲ್ಲಿ ಎರಡು, ಮೂರು ರೂಪಾಯಿ ದರ ಹೆಚ್ಚಿಸಿರಬಹುದು” ಎಂದು ಹೇಳಿದರು.

“ಡೀಸೆಲ್, ಪೆಟ್ರೋಲ್ ಬೆಲೆ ಹೆಚ್ಚಾದಾಗ ವಿಪಕ್ಷಗಳು ಏಕೆ ಮಾತನಾಡಲಿಲ್ಲ? ಅಡುಗೆ ಅನಿಲದ ಬೆಲೆ ಏರಿಕೆಯಾದಾಗ ಏಕೆ ಧ್ವನಿ ಎತ್ತಲಿಲ್ಲ? ರಸಗೊಬ್ಬರ, ಕೀಟನಾಶಕ, ಕಬ್ಬಿಣ, ಸಿಮೆಂಟ್ ಹಾಗೂ ಔಷಧಗಳ ಬೆಲೆ ಹೆಚ್ಚಳದ ಬಗ್ಗೆ ಏಕೆ ಪ್ರತಿಭಟಿಸಲಿಲ್ಲ? ರೈತರು ಬಳಸುವ ಕೃಷಿ ಪರಿಕರಗಳ ಬೆಲೆ ಎಷ್ಟು ಹೆಚ್ಚಾಗಿದೆ ಎಂಬುದರ ಬಗ್ಗೆ ವಿಪಕ್ಷಗಳಿಗೆ ಕಾಳಜಿ ಇಲ್ಲವೇ?” ಎಂದು ಪ್ರಶ್ನಿಸಿದರು.

“ರಾಜ್ಯದ ಬರಗಾಲ ಸಂದರ್ಭದಲ್ಲಿ ರೈತರು ಎಷ್ಟು ಕಷ್ಟಪಡುತ್ತಿದ್ದಾರೆ ಎಂಬ ಅರಿವು ನನಗಿದೆ. ಅವರ ಬದುಕಿನ ಸಂಕಷ್ಟವೂ ನಮಗೆ ಗೊತ್ತಿದೆ. ಅದೇ ರೀತಿ ಸಾರಿಗೆ ಸಂಸ್ಥೆಗಳೂ ಉಳಿಯಬೇಕು. ಅವುಗಳಿಗೂ ಆರ್ಥಿಕವಾಗಿ ಚೇತರಿಸಿಕೊಳ್ಳಲು ಅವಕಾಶ ನೀಡಬೇಕು” ಎಂದು ಹೇಳಿದರು.ಕೇಂದ್ರ ಪೆಟ್ರೋಲ್, ಡೀಸೆಲ್ ದರ ಇಳಿಸಿದರೆ ರಾಜ್ಯದಲ್ಲಿ ಬಸ್ ಪ್ರಯಾಣ ದರ ಕಡಿಮೆ ಮಾಡಲು ಸಿದ್ಧ: ಸಿಎಂ ಡಿ.ಕೆ ಶಿವಕುಮಾರ್

“ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿ, ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿಧಿಸುತ್ತಿರುವ ಸೆಸ್ ಹಾಗೂ ತೆರಿಗೆ ಹೊರೆ ಕಡಿಮೆ ಮಾಡಿಸಲಿ. ಕೇಂದ್ರ ಸರ್ಕಾರ ಇಂಧನ ಬೆಲೆ ಇಳಿಸಿದರೆ ರಾಜ್ಯ ಸರ್ಕಾರವೂ ಅದಕ್ಕೆ ತಕ್ಕಂತೆ ಕ್ರಮ ಕೈಗೊಳ್ಳಲಿದೆ” ಎಂದು ವಿಪಕ್ಷಗಳಿಗೆ ಸವಾಲು ಹಾಕಿದರು.

ಹಾಲಿನ ದರ ಏರಿಕೆ ಬಗ್ಗೆ ಸ್ಪಷ್ಟನೆ

ಕೆಲವು ಕಡೆ ಹಾಲಿನ ದರ ಲೀಟರ್ ಗೆ 8 ರೂ. ಬದಲಿಗೆ 12 ರೂ. ಹೆಚ್ಚಳವಾಗಿದೆ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ, “ಹಾಲಿನ ದರದಲ್ಲಿ ವ್ಯತ್ಯಾಸವಾಗಲು ಅದರ ಗುಣಮಟ್ಟ ಹಾಗೂ ಕೊಬ್ಬಿನ ಅಂಶ ಕಾರಣ” ಎಂದು ತಿಳಿಸಿದರು.

“ಎಲ್ಲ ಹಾಲೂ ಒಂದೇ ರೀತಿಯಲ್ಲಿರುವುದಿಲ್ಲ. ಸಾಮಾನ್ಯ ಹಾಲು, ನಾಟಿ ಹಸುವಿನ ಹಾಲು ಹಾಗೂ ಎಮ್ಮೆ ಹಾಲು ಬೇರೆ ಬೇರೆಯಾಗಿರುತ್ತವೆ. ಅವುಗಳ ಕೊಬ್ಬಿನ ಅಂಶವೂ (ಫ್ಯಾಟ್) ವಿಭಿನ್ನವಾಗಿರುತ್ತದೆ. ಈ ವ್ಯತ್ಯಾಸಗಳನ್ನು ಜನರು ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದರು.Ready jk02_new jk02 new

ರಾಜಮನೆತನದ ಬಗ್ಗೆ ಗೌರವವಿದೆ

ಮೈಸೂರಿನ ರಾಜಮಾತೆ ಪ್ರಮೋದಾದೇವಿಯವರು ದಸರಾ ಅವ್ಯವಸ್ಥೆಯ ಬಗ್ಗೆ ಸಿಎಂ ಮಾತನಾಡುವುದಾಗಿ ಹೇಳಿದ್ದು ಇನ್ನೂ ಮಾತನಾಡಿಲ್ಲದ್ದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ “ಈ ಬಗ್ಗೆ ನನಗೆ ಗೊತ್ತಿಲ್ಲ. ಈ ರಾಜ್ಯದ ರಾಜಮನೆತನಕ್ಕೆ ಗೌರವ ನೀಡುತ್ತೇವೆ. ನೀವು ಹೇಳಿದಿರಿ ಎಂದು ನಿಮ್ಮ ಮಾತುಗಳನ್ನು ಕೇಳುವುದಕ್ಕೆ ಸಾಧ್ಯವಿಲ್ಲ. ಮಾಧ್ಯಮಗಳು ಬೇಕಾದಂತೆ ಕೇಳಿದರೆ ಪ್ರತಿಕ್ರಿಯೆ ನೀಡಲಾಗುವುದಿಲ್ಲ. ಇದರ ಬಗ್ಗೆ ತಿಳಿದುಕೊಂಡು ಅವರೊಂದಿಗೂ ಮಾತನಾಡುತ್ತೇನೆ” ಎಂದರು.

Ready, reduce, bus fares, Centre, lowers, petrol, diesel prices, CM, D.K. Shivakumar

English Summary
Title

Ready to reduce bus fares in the state if the Centre lowers petrol and diesel prices: CM D.K. Shivakumar

Short Description
"If the Central Government reduces the prices of petrol and diesel, we are prepared to lower bus fares in the state accordingly," stated Chief Minister D.K. Shivakumar. Shivakumar made these remarks on Wednesday while responding to questions from the media at the Vidhana Soudha. When asked about the statewide protests called by the opposition parties for Thursday—in opposition to the hike in bus fares—he explained, "Transport corporations are currently running at a loss. There was a situation where they lacked the funds to purchase diesel even ten days to three weeks in advance; the government had to step in and provide the necessary capital. Furthermore, the 'Shakti' scheme, which offers free travel to women, has placed an additional financial burden on these transport corporations. Consequently, fares may have been increased by two or three rupees in a phased manner."
Keywords
Ready, reduce, bus fares, Centre, lowers, petrol, diesel prices, CM, D.K. Shivakumar