Friday, August 7, 2026

BDA Apartments

Home Crime ಸರ್ಕಾರಿ ಬಸ್ ಪಲ್ಟಿ: ಓರ್ವ ವಿದ್ಯಾರ್ಥಿ ಸಾವು: 20ಕ್ಕೂ ಹೆಚ್ಚು ಪ್ರಯಾಣಿಕರ ಸ್ಥಿತಿ ಚಿಂತಾಜನಕ

ಸರ್ಕಾರಿ ಬಸ್ ಪಲ್ಟಿ: ಓರ್ವ ವಿದ್ಯಾರ್ಥಿ ಸಾವು: 20ಕ್ಕೂ ಹೆಚ್ಚು ಪ್ರಯಾಣಿಕರ ಸ್ಥಿತಿ ಚಿಂತಾಜನಕ

ದಾವಣಗೆರೆ,ಮೇ,8,2026 (www.justkannada.in): ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ 50 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆಯಿಂದ ಬಸವಪಟ್ಟಣಕ್ಕೆ ಹೋಗುತ್ತಿದ್ದ ಸರ್ಕಾರಿ ಬಸ್ ಏಕಾ ಏಕಿ ಅಕ್ಸಲ್ ಕಟ್ ಆಗಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದರೇ 50 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 20ಕ್ಕೂ ಹೆಚ್ಚು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಗಾಯಾಳುಗಳನ್ನು ಬಸವಪಟ್ಟಣ ಆಸ್ಪತ್ರೆಗೆ ಮತ್ತು ದಾವಣಗೆರೆ ಜಿಲ್ಲಾಸ್ಪತ್ರಗೆ ದಾಖಲು ಮಾಡಲಾಗಿದೆ. ಸ್ಥಳಕ್ಕ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Key words: Government bus, overturns, student, dies