ಉದ್ಯಮಿಗೆ ವಂಚನೆ ಪ್ರಕರಣ: ಅಭಿನವ ಹಾಲಶ್ರೀ 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ.

ಬೆಂಗಳೂರು,ಸೆಪ್ಟೆಂಬರ್ 20,2023(www.justkannada.in): ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ಚೈತ್ರಾ ಕುಂದಾಪುರ ಆ್ಯಂಡ್ ​ ಗ್ಯಾಂಗ್ ​ನಿಂದ 5 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿ ಅಭಿನವ ಹಾಲಶ್ರೀಯನ್ನು10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 19ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಸೆಪ್ಟೆಂಬರ್ 29ರವರೆಗೆ ಹಾಲಶ್ರೀಯನ್ನು ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 19ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.  ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆ, ಮಹಜರು ಪ್ರಕ್ರಿಯೆ ನಡೆಸಬೇಕರುವುದರಿಂದ ಆರೋಪಿಯನ್ನು ತಮ್ಮ ವಶಕ್ಕೆ ನೀಡಬೇಕೆಂದು ಕೋರ್ಟ್ ನಲ್ಲಿ ಸಿಸಿಬಿ ಪೊಲೀಸರು ಮನವಿ ಮಾಡಿದ್ದರು.

ಸಿಸಿಬಿ ಈ ಮನವಿ ಪುರಸ್ಕರಿಸಿದ ಕೋರ್ಟ್, ಆರೋಪಿ  ಹಾಲಶ್ರೀಯನ್ನು ಸೆಪ್ಟೆಂಬರ್ 29ರ ವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿದೆ. ಇನ್ನು ಹಾಲಶ್ರೀ ಜಾಮೀನು ಅರ್ಜಿ ವಿಚಾರಣೆಯನ್ನು ಕಾಯ್ದಿರಿಸಿದೆ.

ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಎನ್ನುವರಿಗೆ ಕೋಟ್ಯಂತರ ರೂಪಾಯಿ ಪಡೆದು ವಂಚನೆ ಮಾಡಿದ ಪ್ರಕರಣ ಇದಾಗಿದೆ. ತಲೆಮರೆಸಿಕೊಂಡಿದ್ದ ಪ್ರಕರಣದ ಮೂರನೇ ಆರೋಪಿ ಹಾಲಶ್ರೀಯನ್ನು ನಿನ್ನೆ ಒಡಿಶಾದ ಕಟಕ್ ​ನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದರು.

Key words: Businessman –fraud- case-Abhinav Halashree – CCB custody -10 days.