Thursday, September 17, 2026

BDA Apartments

ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು BDA JK_Adv BDA Adv
Home Front Page ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಮುಂಬೈ,ಅಕ್ಟೋಬರ್, 7,2024 (www.justkannada.in): ಉದ್ಯಮಿ ರತನ್ ಖ್ಯಾತ ಉದ್ಯಮಿ ರತನ್ ಟಾಟಾ ಅವರು ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಮುಂಬೈ ಬೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಕ್ತದೊತ್ತಡ ಕಡಿಮೆಯಾದ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ರತನ್ ಟಾಟಾ ಅವರನ್ನು ಮುಂಜಾನೆ 12.30 ರಿಂದ 1.00 ರ ನಡುವೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತರಲಾಗಿದೆ ಎಂದು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಮೂಲಗಳು  ತಿಳಿಸಿವೆ.

ಖ್ಯಾತ ಹೃದ್ರೋಗ ತಜ್ಞ ಡಾ.ಶಾರುಖ್ ಆಸ್ಪಿ ಗೋಲ್ವಾಲಾ ನೇತೃತ್ವದ ತಜ್ಞರ ತಂಡವು ಉದ್ಯಮಿ ರತನ್ ಟಾಟಾ ಅವರ ಆರೋಗ್ಯ ವಿಚಾರಣೆ ನಡೆಸುತ್ತಿದ್ದಾರ ಎನ್ನಲಾಗಿದೆ .

Key words: Businessman, Ratan Tata,  health,  Hospitalized