ಒಕ್ಕಲಿಗ ಸಂಪ್ರದಾಯದಂತೆ ಕೆಲವೇ ಹೊತ್ತಿನಲ್ಲಿ ಉದ್ಯಮಿ ಸಿದ್ಧಾರ್ಥ್ ಅವರ ಅಂತ್ಯಕ್ರಿಯೆ: ಗಣ್ಯರು ಮತ್ತು ಸಾರ್ವಜನಿಕರಿಂದ ಅಂತಿಮ ದರ್ಶನ….

ಚಿಕ್ಕಮಗಳೂರು,ಜು,31,2019(www.justkannada.in):  ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಳಿಯ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ದಾರ್ಥ್ ಅವರ ಅಂತ್ಯಕ್ರಿಯೆ ಒಕ್ಕಲಿಗ ಸಂಪ್ರದಾಯದಂತೆ  ಅಂತ್ಯಕ್ರಿಯೆ ನೆರವೇರಲಿದ್ದು ಇದಕ್ಕೆ ಸಿದ್ಧತೆ ನಡೆಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಚೇತನಹಳ್ಳಿ ಎಸ್ಟೇಟ್  ನಲ್ಲಿ  ಸಿದ್ಧಾರ್ಥ್ ಅವರ ಅಂತ್ಯಕ್ರಿಯೆ ನೆರವೇರಲಿದೆ. ಇನ್ನು ಈಗಾಗಲೇ ಪಾರ್ಥೀವ ಶರೀರ ಚೇತನಹಳ್ಳಿ ಎಸ್ಟೇಟ್ ಗೆ ರವಾನಿಸಲಾಗಿದ್ದು  ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ, ಮಾಜಿ ಸಚಿವ ಹೆಚ್.ಕೆ ಪಾಟೀಲ್ ಸೇರಿ ಹಲವು ಗಣ್ಯರು ಸಿದ್ಧಾರ್ಥ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.

ಸಾರ್ವಜನಿಕರ ಅಂತಿಮದರ್ಶನ ನಡೆಯುತ್ತಿದ್ದು ಕೆಲವೇ ಹೊತ್ತಿನಲ್ಲಿ ಸಿದ್ಧಾರ್ಥ್ ಅವರ ಅಂತ್ಯಕ್ರಿಯೆ ನೆರವೇರಲಿದೆ. ಅಂತಿಮ ದರ್ಶನ ಪಡೆಯಲು ಜನರಲ್ಲಿ ನೂಕು ನುಗ್ಗಲು ಉಂಟಾಗಿದೆ.  ಸಿದ್ಧಾರ್ಥ್ ಅವರ ಹಿರಿಯ ಪುತ್ರ ಅಮರ್ಥ್ಯ ಚಿತೆಗೆ ಅಗ್ನಿಸ್ಪರ್ಶ ಮಾಡಲಿದ್ದು, ವಿಭೂತಿ, ಕರ್ಪೂರ, ಸಾಂಬ್ರಾಣಿ, ತುಪ್ಪ, ಕೊಬ್ಬರಿ ಸೇರಿದಂತೆ ಇತರೇ ವಸ್ತುಗಳನ್ನು ಬಳಸಲಾಗುತ್ತಿದೆ.   ಅಂತ್ಯಕ್ರಿಯೆಗೆ ಸೌದೆಗಳನ್ನು ಜೋಡಿಸಲಾಗುತ್ತಿದ್ದು, ಮಾವು, ಹಲಸು, ಶ್ರೀಗಂಧದ ಮರಗಳನ್ನು ಬಳಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

 

key words: Businessman- Siddharth’s -funeral – Chetanahalli estate