ಉದ್ಯಮಿ ಆರ್.ಎನ್.ಶೆಟ್ಟಿ ನಿಧನಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ

ಬೆಂಗಳೂರು,ಡಿಸೆಂಬರ್,17,2020(www.justkannada.in) : ನಾಡಿನ ಖ್ಯಾತ ಉದ್ಯಮಿ ಆರ್.ಎನ್.ಶೆಟ್ಟಿ ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

Teachers,solve,problems,Government,bound,Minister,R.Ashok

ಆರ್.ಎನ್.ಶೆಟ್ಟಿ ಅವರು ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿ, ಹೋಟೆಲ್ ಉದ್ಯಮ, ಶಿಕ್ಷಣ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ. ಕುಟುಂಬದವರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ರಾಜ್ಯದ ಖ್ಯಾತ ಉದ್ಯಮಿ, ಸಮಾಜಸೇವಕ, ಧಾರ್ಮಿಕ ಹಾಗು ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದ ಡಾ. ಆರ್.ಎನ್.ಶೆಟ್ಟಿ ಅವರ ನಿಧನದ ವಿಷಯ ತುಂಬಾ ವಿಷಾದನೀಯ ಸಂಗತಿ. ದೇವರು ಅವರ ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

key words : Businessman-R.N.Shetty-passes-away-CM B.S.Yeddyurappa