ಬಾಗಲಕೋಟೆ/ದಾವಣಗೆರೆ,ಏಪ್ರಿಲ್,,9,2026 (www.justkannada.in): ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ನಡೆಯುತ್ತಿದೆ.
ಬಾಗಲಕೋಟೆ ಕ್ಷೇತ್ರ ವ್ಯಾಪ್ತಿಯ332 ಮತಗಟ್ಟೆಗಳಲ್ಲಿ ದಾವಣಗೆರೆ ಕ್ಷೇತ್ರದ 284 ಮತಗಟ್ಟೆಗಳಲ್ಲಿ ನಿಗದಿಯಂತೆ ಬೆಳಿಗ್ಗೆ 7ಕ್ಕೆ ಮತದಾನ ಶುರುವಾಗಿದೆ. ಮತದಾರರು ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ ಮಾಡುತ್ತಿದ್ದಾರೆ.
ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರು ಬಾಗಲಕೋಟೆ ತಾಲ್ಲೂಕಿನ ತಿಮ್ಮಾಪುರದಲ್ಲಿ ಮತ ಚಲಾಯಿಸಿದರು. ಹಾಗೆಯೇ ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿ ಮಠ ಅವರು ಕುಟುಂಬ ಸದಸ್ಯರೊಂದಿಗೆ ಆಗಮಿಸಿ ಮತಗಟ್ಟೆ ಸಂಖ್ಯೆ 166ರಲ್ಲಿ ಮತದಾನ ಮಾಡಿದರು.
ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ಇದ್ದು ಮೇ 4 ರಂದು ಫಲಿತಾಂಶ ಹೊರಬೀಳಲಿದೆ.
Key words: Bagalkot, Davangere South, by-election







